ಬೈಕ್​ ಸವಾರ ಸ್ಥಳದಲ್ಲಿಯೇ ಮೃತ್ಯು

5Athanigrameen4
Published on

ಅಥಣಿ ಗ್ರಾಮೀಣ: ಕಾರ್​ ಮತ್ತು ಬೈಕ್​ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್​ ಸವಾರ ಸ್ಥಳದಲ್ಲೇ ಮೃತಪಟ್ಟು, ಹಿಂಬದಿ ಸವಾರ ಗಂಭೀರ ಗಾಯಗೊಂಡ ಟನೆ ಅಥಣಿ ತಾಲೂಕಿನ ಕೊಕಟನೂರ ಕ್ರಾಸ್​ ಬಳಿ ಸಂಕೇಶ್ವರ&ಜೇವರ್ಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಭವಿಸಿದೆ.

ತಾಲೂಕಿನ ಖೋತನಟ್ಟಿ ಗ್ರಾಮದ ರಾಜು ಖೋತ (45) ಮೃತ. ಅವರ ಪುತ್ರ ರಾಯಲಿಂಗೇಶ್ವರ (12) ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಗ್ರಾಮದಿಂದ ಬೈಕ್​ ಮೇಲೆ ಹೊಲಕ್ಕೆ ತೆರಳುವ ವೇಳೆ ವಿಜಯಪುರ ಕಡೆಯಿಂದ ಅಥಣಿ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದು ದುರ್ಟನೆ ಸಂಭವಿಸಿದೆ. ಈ ಕುರಿತು ಐಗಳಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net