ಬೈಕ್ ಸವಾರ ಸ್ಥಳದಲ್ಲಿಯೇ ಮರಣ

bike accident 1
Published on

ನರಗುಂದ: ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಹೊಡೆದು ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಕುರ್ಲಗೇರಿ ಬಳಿ ಸೋಮವಾರ ಸಂಭವಿಸಿದೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕು ತಡಹಾಳ ಗ್ರಾಮದ ಸುರೇಶ (26) ಮೃತ ದುರ್ದೈವಿ. ಹಿಂಬದಿ ಸವಾರ ಸಂತೋಷಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್‌ಗೆ ದಾಖಲಿಸಲಾಗಿದೆ. ಶ್ರೀ ಬಸವೇಶ್ವರ ಜಾತ್ರೆ ನಿಮಿತ್ತ ಬೈಕ್ ಸವಾರರಿಬ್ಬರು ತಡಹಾಳದಿಂದ ಸೋಮವಾರ ಬೆಳಗ್ಗೆ ನರಗುಂದಕ್ಕೆ ಆಗಮಿಸಿದ್ದರು. ಸಾಯಂಕಾಲ ಮರಳಿ ಸ್ವಗ್ರಾಮಕ್ಕೆ ತೆರಳುವಾಗ ಈ ದುರ್ಘಟನೆ ಸಂಭವಿಸಿದೆ. ನರಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net