ಹಿಂಸೆಗೆ ಒತ್ತು ನೀಡಿದ ಬಿಜೆಪಿ ಸರ್ಕಾರ

ckm gandi
ಜಿಲ್ಲಾ ನ್ಯಾಯಾಲಯದ ಸಮೀಪದ ಮಹಾತ್ಮ ಗಾಂಧಿ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವ ಮೂಲಕ ಜಿಲ್ಲಾ ಕಾಂಗ್ರೆಸ್‌ನಿಂದ ಹುತಾತ್ಮರ ದಿನ ಆಚರಿಸಲಾಯಿತು. ಎಂ.ಸಿ.ಶಿವಾನಂದಸ್ವಾಮಿ, ಎಚ್.ಪಿ.ಮಂಜೇಗೌಡ, ಬಿ.ಎಚ್.ಹರೀಶ್, ವೆಂಕಟೇಶ್ ನಾಯ್ಡು ಇತರರಿದ್ದರು.
Published on

ಚಿಕ್ಕಮಗಳೂರು: ಪ್ರಪಂಚವೇ ಮೆಚ್ಚಿದ ಮಹಾತ್ಮ ಗಾಂಧಿ ಅವರನ್ನು ಕೊಂದ ನಾಥೂರಾಮ್ ಗೂಡ್ಸೆಯನ್ನು ದೇವರು ಎಂದು ಹೇಳುವ ಮೂಲಕ ಹಿಂಸೆಗೆ ಒತ್ತು ನೀಡುವ ಸಂಘ ಪರಿವಾರದ ಬಿಜೆಪಿ ಸರ್ಕಾರವನ್ನು ಕಿತ್ತೊಗೆಯುವ ಪ್ರತಿಜ್ಞೆ ಪ್ರತಿಯೊಬ್ಬರೂ ಮಾಡಬೇಕು ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ ಹೇಳಿದರು.

ಜಿಲ್ಲಾ ನ್ಯಾಯಾಲಯದ ಸಮೀಪ ಮಹಾತ್ಮ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಬುಡಸಮೇತ ಕಿತ್ತುಹಾಕಬೇಕು ಎಂದು ಹೇಳಿದರು.
ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದಸ್ವಾಮಿ ಮಾತನಾಡಿ, ಗುಂಡು ಹಾರಿಸಿದವನನ್ನು ಕ್ಷಮಿಸು ಎಂದು ಹೇಳಿ ಮಹಾತ್ಮ ಗಾಂಧಿ ಹುತಾತ್ಮರಾದರು. ಗಾಂಧಿ ಆದರ್ಶವನ್ನು ಪ್ರತಿಯೊಬ್ಬರೂ ಪಾಲಿಸುವಂತಾಗಬೇಕು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಎಚ್.ಹರೀಶ್, ಪ್ರಧಾನ ಕಾರ್ಯದರ್ಶಿ ವೆಂಕಟೇಶ್ ನಾಯ್ಡು, ನಗರ ಘಟಕದ ಅಧ್ಯಕ್ಷ ತನೋಜ್ ನಾಯ್ಡು, ಎನ್‌ಎಸ್‌ಯುಐ ಅಧ್ಯಕ್ಷ ಶ್ರೀಕಾಂತ್, ಬಿಸಿಎಂ ವಿಭಾಗದ ಅಧ್ಯಕ್ಷ ಡಿ.ಸಿ.ಪುಟ್ಟೇಗೌಡ, ಸೇವಾದಳ ಅಧ್ಯಕ್ಷ ಬಸವರಾಜ್, ಪ್ರಮುಖರಾದ ಶಿವರಾಂ, ರಾಮಚಂದ್ರ, ಪ್ರವೀಣ್, ಚಂದ್ರಪ್ಪ, ಜಯರಾಜ್ ಅರಸ್, ವಿನಾಯಕ, ಶೃದೀಪ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net