

ಶಿರಾ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಕಳ್ಳಂಬೆಳ್ಳ ಹೋಬಳಿಯ ಗ್ರಾಮಗಳಲ್ಲಿ ಅಭ್ಯರ್ಥಿ ಡಾ.ರಾಜೇಶ್‌ಗೌಡ ಪರವಾಗಿ ಸೋಮವಾರ ಪ್ರಚಾರ ನಡೆಸಿದ್ದು, ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಪೊಲೀಸ್ ಹಾಗೂ ಗುಪ್ತಚರ ಇಲಾಖೆ ಮಾಹಿತಿಯಲ್ಲಿ ಬಿಜೆಪಿ ಗೆಲ್ಲುವ ಬಗ್ಗೆ ಮಾಹಿತಿ ಇದೆ, ಇದೇ ಮೊದಲ ಬಾರಿ ಶಿರಾದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಲಿದೆ ಎಂದರು.
40 ವರ್ಷದಿಂದ ಅಧಿಕಾರದಲ್ಲಿದ್ದ ವಾಜಿ ಶಾಸಕರು ಅಂದು ಹಿಂದುಳಿದ ವರ್ಗಕ್ಕೆ ಅಭಿವೃದ್ಧಿ ಯೋಜನೆ ಏಕೆ ರೂಪಿಸಲಿಲ್ಲ, ಬಿಜೆಪಿ ಸರ್ಕಾರ ಕಾಡುಗೊಲ್ಲ ಸವಾಜಕ್ಕೆ ಅಭಿವೃದ್ಧಿ ನಿಗಮ ವಾಡಿದ್ದಕ್ಕೆ ಟೀಕೆ ಏಕೆ? ಈ ದೇಶದಲ್ಲಿ ದಲಿತ ಮತ್ತು ಹಿಂದುಳಿದ ವರ್ಗದ ಸಂಸದರು ಆಯ್ಕೆಯಾಗಿರುವುದು ಬಿಜೆಪಿಯಿಂದ ಮಾತ್ರ ಎಂದರು. ರೈತಾಪಿ ವರ್ಗಕ್ಕೆ ಕಿಸಾನ್ ಸವ್ಮಾನ್ ಯೋಜನೆಯಲ್ಲಿ ಹತ್ತು ಸಾವಿರ ರೂಪಾಯಿ ನೀಡಲಾಗಿದೆ, ದೇಶಕ್ಕೆ ಬಂದಿರುವ ಕರೊನಾ ವಿಪತ್ತಿನ ಸಂದರ್ಭದಲ್ಲಿ ಗರೀಬ್ ಕಲ್ಯಾಣ ಯೋಜನೆಯಡಿಯಲ್ಲಿ ಏಳು ತಿಂಗಳಿಂದ ಪಡಿತರ ವಿತರಿಸಲಾಗಿದೆ ಎಂದರು.
ಜಿಲ್ಲಾಧ್ಯಕ್ಷ ಬಿ.ಸುರೇಶ್‌ಗೌಡ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಿ.ಕೆ.ಮಂಜುನಾಥ್, ತುಮುಲ್ ನಿರ್ದೇಶಕ ಎಸ್.ಆರ್.ಗೌಡ, ವಾಜಿ ಅಧ್ಯಕ್ಷ ವಾಲಿಮರಿಯಪ್ಪ, ಬಸವರಾಜು ಇದ್ದರು.
ಬೆಂಗಳೂರಿನಲ್ಲಿ ಜೆಡಿಎಸ್ ಸಭೆ: ಶಿರಾ ಉಪಸಮರದ ಪ್ರಚಾರದಲ್ಲಿ ಸಪ್ಪೆಯಾಗಿಯೇ ಕಾಣಿಸುತ್ತಿರುವ ಜೆಡಿಎಸ್ ಮುಖಂಡರು ಸೋಮವಾರ ಬೆಂಗಳೂರಿನಲ್ಲಿ ವರಿಷ್ಠರನ್ನು ಭೇಟಿಯಾಗಿ ಚುನಾವಣೆ ತಂತ್ರಗಾರಿಕೆ ಬಗ್ಗೆ ಪ್ರಮುಖ ಸಭೆ ನಡೆಸಿದ್ದಾರೆ. ಕ್ಷೇತ್ರದಲ್ಲಿ ಪ್ರಚಾರದಲ್ಲಿ ಕಾಣಿಸಿಕೊಳ್ಳದ ಸ್ಥಳೀಯ ಮುಖಂಡರೆಲ್ಲಾ ಬೆಂಗಳೂರಿಗೆ ತೆರಳಿ ಎಚ್.ಡಿ.ಕುಮಾರಸ್ವಾಮಿ ಜತೆ ಸುದೀರ್ಘವಾಗಿ ಚರ್ಚಿಸಿದ್ದಾರೆ ಎನ್ನಲಾಗಿದೆ. ಕ್ಷೇತ್ರದಲ್ಲಿ ಪ್ರಚಾರದಲ್ಲಿ ಹಿಂದುಳಿದಿರುವ ಬಗ್ಗೆ ಮುಖಂಡರು ವರಿಷ್ಠರ ಗಮನಕ್ಕೆ ತಂದಿದ್ದು ಕ್ಷೇತ್ರದಲ್ಲಿ ವಾಸ್ತವ್ಯ ಮಾಡುವಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಮಠಗಳಿಗೆ ಜಯಚಂದ್ರ: ಚುನಾವಣಾ ಪ್ರಚಾರಕ್ಕೆ ವಿರಾಮ ನೀಡಿ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಸೋಮವಾರ ವಿವಿಧ ಜಾತಿಯ ಮಠಗಳಿಗೆ ಭೇಟಿಯಿತ್ತು ಆಶೀರ್ವಾದ ಪಡೆದುಕೊಂಡರು. ಹೊಸದುರ್ಗದ ಶ್ರೀ ಕನಕ ಗುರುಪೀಠದ ಶ್ರೀ ಈಶ್ವರಾನಂದಪುರಿ ಸ್ವಾಮೀಜಿ ಹಾಗೂ ಕುಂಚಿಟಿಗ ಮಹಾಸಂಸ್ಥಾನದ ಮಠದ ಶ್ರೀ ಶಾಂತವೀರ ಸ್ವಾಮೀಜಿ ಆಶೀರ್ವಾದ ಪಡೆದರು. ಉಪ್ಪಾರ ಶ್ರೀ ಭಗೀರಥ ಪೀಠದ ಶ್ರೀ ಪುರುತ್ತೋಮನಾಂದಪುರ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆಯುವ ಮೂಲಕ ಆ ಸಮಾಜಗಳಿಗೆ ಸಂದೇಶರವಾನಿಸುವ ಕೆಲಸ ಮಾಡಿದರು.