ಬರದಿಂದ ಅನ್ನದಾತ ಕಂಗಾಲು; ಪರಿಹಾರ ಘೋಷಣೆಗೆ ಶಾಸಕ ಬಿ.ವೈ.ವಿಜಯೇಂದ್ರ ಆಗ್ರಹ

15 ಎಸ್ಕೆಪಿ 5
ಹಾಳಾದ ಮೆಕ್ಕೆಜೋಳ ಬೆಳೆಗಳನ್ನು ಶಾಸಕ ಬಿ.ವೈ.ವಿಜಯೇಂದ್ರ ವೀಕ್ಷಿಸಿದರು. ಕೆ.ಎಸ್.ಗುರುಮೂರ್ತಿ, ವೀರೇಂದ್ರ ಪಾಟೀಲ್, ಯೋಗೀಶ್, ಪರಮೇಶ್ವರಪ್ಪ, ಯೋಗೀಶ್ ಇತರರಿದ್ದರು.
Published on

ಶಿಕಾರಿಪುರ: ಪ್ರಕೃತಿ ವೈಪರೀತ್ಯ, ಬರಗಾಲದಿಂದ ತಾಲೂಕಿನ ರೈತರು ಕಂಗಾಲಾಗಿದ್ದಾರೆ. ಬಹುತೇಕ ಮೆಕ್ಕೆಜೋಳದ ಬೆಳೆ ಹಾಳಾಗಿದೆ ಎಂದು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದರು.

ತಾಲೂಕಿನ ತಾಳಗುಂದ, ಉಡುಗಣಿ ಹೋಬಳಿಯ ವಿವಿಧ ಗ್ರಾಮಗಳಿಗೆ ಶುಕ್ರವಾರ ಭೇಟಿ ನೀಡಿ, ಹಾಳಾದ ಮೆಕ್ಕೆಜೋಳ ಬೆಳೆಯನ್ನು ವೀಕ್ಷಿಸಿ ಮಾತನಾಡಿ, ರಾಜ್ಯ ಸರ್ಕಾರವು ಬರದಿಂದ ಬಾಧಿತರಾಗಿರುವ ರೈತರಿಗೆ ಸೂಕ್ತ ಪರಿಹಾರ ಘೋಷಿಸಬೇಕು ಎಂದು ಆಗ್ರಹಿಸಿದರು. ಕೇಂದ್ರ ಸರ್ಕಾರ ಎನ್‌ಡಿಆರ್‌ಎಫ್‌ನಿಂದಲೂ ನಮ್ಮ ರೈತರಿಗೆ ಬರ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಭರವಸೆ ನೀಡಿದರು.
ಈ ಬಾರಿ ಮಳೆಯ ಕೊರತೆ ಇರುವುದರಿಂದ ರೈತರಿಗೆ ಅನಾನುಕೂಲವಾಗಿದೆ. ಈ ನಡುವೆ ತಾಲೂಕಿನಾದ್ಯಂತ ಎಲ್ಲ ಹೋಬಳಿಗಳಲ್ಲಿಯೂ ಲದ್ದಿ ಹುಳುವಿನ ಬಾಧೆ ಕೂಡ ಜಾಸ್ತಿಯಾಗಿದ್ದು ಕೂಡ ರೈತರ ಆತಂಕವುಂಟು ಮಾಡಿತ್ತು. ಶಾಶ್ವತ ನೀರಾವರಿ ಯೋಜನೆ ರೈತರಿಗೆ ವರದಾನವಾಗಲೆಂದೇ ಅನುಷ್ಠಾನಗೊಳಿಸಲಾಗಿದೆ ಎಂದರು.
ಮಲೆನಾಡು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಕೆ.ಎಸ್.ಗುರುಮೂರ್ತಿ, ತಾಲೂಕು ಬಿಜೆಪಿ ಅಧ್ಯಕ್ಷ ವೀರೇಂದ್ರ ಪಾಟೀಲ್, ಉಪಾಧ್ಯಕ್ಷ ಪರಮೇಶ್ವರಪ್ಪ, ಮಹಾಶಕ್ತಿ ಅಧ್ಯಕ್ಷ ಯೋಗೀಶ್, ಪ್ರಧಾನ ಕಾರ್ಯದರ್ಶಿ ಶಿವಬಸಣ್ಣ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂದ್ರಶೇಖರಣ್ಣ, ಕೊರಟಿಕೆರೆ ಗ್ರಾಪಂ ಸದಸ್ಯ ಕುಬೇರಣ್ಣ, ಪ್ರಧಾನ ಕಾರ್ಯದರ್ಶಿ ಸಂಕ್ಲಾಪುರ ಹನುಮಂತಪ್ಪ, ತಾಪಂ ಮಾಜಿ ಅಧ್ಯಕ್ಷ ಶಂಬು ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net