ಮಳೆಗೆ ಕೊಚ್ಚಿ ಹೋದ ಸೇತುವೆ

7Athanigrameen1
Published on

ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಪೂರ್ವ ಭಾಗದಲ್ಲಿ ಮಂಗಳವಾರ ಸುರಿದ ಧಾರಾಕಾರ ಮಳೆಗೆ ಕೋಹಳ್ಳಿ ಗ್ರಾಮದ ಬಳಿ ಇರುವ ಬಾಳಿ ಹಳ್ಳದ ಸೇತುವೆ ಕೊಚ್ಚಿ ಹೋಗಿ ಸಂಚಾರಕ್ಕೆ ತೊಂದರೆಯಾಗಿದೆ.

ಅಥಣಿ ಮುಖ್ಯ ರಸ್ತೆಯಿಂದ ರಾಮತೀರ್ಥ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಇದಾಗಿದೆ. ಶಾಲಾ ಮಕ್ಕಳು, ವಯೋವೃದ್ಧರಿಗೆ, ಪಟ್ಟಣಕ್ಕೆ ಹಾಲು, ತರಕಾರಿ ಮಾರಾಟಕ್ಕೆ ತೆರಳುವವರು ಸೇರಿ ಅಗತ್ಯ ಕೆಲಸಕ್ಕೆ ಹೋಗುವವರಿಗೆ ಈ ಸೇತುವೆಯೇ ಆಸರೆಯಾಗಿತ್ತು. ಇದೀಗ ಸೇತುವೆ ಕೊಚ್ಚಿಕೊಂಡು ಹೋಗಿರುವ ಕಾರಣಕ್ಕೆ ಜನರು ಪರದಾಡುವಂತಾಗಿದೆ.

ಸೇತುವೆ ನಿರ್ಮಾಣ ಕಾರ್ಯವಾಗಲಿ: 15 ವರ್ಷಗಳ ಹಿಂದೆ ನಿರ್ಮಿಸಿದ ಈ ಸೇತುವೆ ಸಂಪೂರ್ಣ ಹಾಳಾಗಿತ್ತು. ಹೊಸ ಸೇತುವೆ ನಿರ್ಮಿಸಿ ಕೊಡುವಂತೆ ಸಂಬಂಧಿಸಿದ ಅಧಿಕಾರಿ ಮತ್ತು ಜನಪ್ರತಿನಿಧಿಗಳಿಗೆ ಒತ್ತಾಯಿಸಿದ್ದರೂ ಸೇತುವೆ ನಿರ್ಮಾಣಕ್ಕೆ ಮುಂದಾಗಿಲ್ಲ. ಪರಿಣಾಮ ಈಗ ಸೇತುವೆ ಮಳೆ ನೀರಿಗೆ ಕೊಚ್ಚಿ ಹೋಗಿದೆ. ಇನ್ನಾದರೂ ಸಂಬಂಧಿಸಿದ ಅಧಿಕಾರಿಗಳು ಸುಸಜ್ಜಿತ ಸೇತುವೆ ನಿರ್ಮಾಣ ಮಾಡಬೇಕು ಎಂದು ಗ್ರಾಮಸ್ತರು ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net