ದೇಶದ ಉಜ್ವಲ ಭವಿಷ್ಯದ ನಿರ್ಮಾತೃ

TEACHERS DAY
ನರಗುಂದ ಲಯನ್ಸ್ ಶಿಕ್ಷಣ ಸಂಸ್ಥೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಶಿಕ್ಷಕರ ದಿನ ಆಚರಿಸಲಾಯಿತು. ಜಿ.ಟಿ. ಗುಡಿಸಾಗರ, ಸಿ.ಎಸ್. ಸಾಲೂಟಗಿಮಠ, ಎಸ್.ಜಿ. ಜಕ್ಕಲಿ, ಡಾ. ವೈ.ಪಿ. ಕಲ್ಲನಗೌಡರ ಇತರರಿದ್ದರು.
Published on

ನರಗುಂದ: ಶಿಕ್ಷಕರಿಂದ ಮಾತ್ರ ದೇಶದ ಉಜ್ವಲ ಭವಿಷ್ಯ ನಿರ್ಮಾಣ ಸಾಧ್ಯ. ಶಿಕ್ಷಕರು ವ್ಯಕ್ತಿ ಗೌರವದ ಜತೆಗೆ ವೃತ್ತಿ ಗೌರವವನ್ನು ಹೆಚ್ಚಿಸಬೇಕು ಎಂದು ಲಯನ್ಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಜಿ.ಟಿ. ಗುಡಿಸಾಗರ ಹೇಳಿದರು.

ಪಟ್ಟಣದ ಲಯನ್ಸ್ ಶಿಕ್ಷಣ ಸಂಸ್ಥೆಯ ಲಯನ್ಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುವಾರ ಹಮ್ಮಿಕೊಂಡಿದ್ದ ಶಿಕ್ಷಕರ ದಿನಾಚರಣೆಯಲ್ಲಿ ಅವರು ಮಾತನಾಡಿದರು. ಶಿಕ್ಷಕ ಹುದ್ದೆ ಎಲ್ಲ ವೃತ್ತಿಗಳಲ್ಲಿ ಶ್ರೇಷ್ಟವಾದುದು. ಜ್ಞಾನವಿಲ್ಲದೆ ಯಾವುದನ್ನು ಪಡೆಯಲು ಸಾಧ್ಯವಿಲ್ಲ. ಅದನ್ನು ನೀಡುವ ಏಕೈಕ ವ್ಯಕ್ತಿ ಶಿಕ್ಷಕ, ಗುರುಗಳು. ಡಾ. ಸರ್ವೆಪಲ್ಲಿ ರಾಧಾಕೃಷ್ಣನ್ ಅವರ ಜೀವನಾದರ್ಶಗಳನ್ನು ಎಲ್ಲ ಶಿಕ್ಷಕರು ಅಳವಡಿಸಿಕೊಳ್ಳಬೇಕು. ವಿದ್ಯಾರ್ಥಿಗಳೇ ಶಿಕ್ಷಕರ ನಿಜವಾದ ಆಸ್ತಿ. ಅವರಲ್ಲಿ ಮಾನವೀಯ ಮೌಲ್ಯಗಳನ್ನು ಬಿತ್ತಿ ಉತ್ತಮ ವ್ಯಕ್ತಿಗಳನ್ನಾಗಿ ರೂಪಿಸಬೇಕು ಎಂದರು.

ನಿರ್ದೇಶಕ ಸಿ.ಎಸ್. ಸಾಲೂಟಗಿಮಠ ಮಾತನಾಡಿ, ಶಿಕ್ಷಕರು ಉತ್ತಮ ಮೌಲ್ಯಗಳನ್ನು ಹೆಚ್ಚಿಸಿಕೊಂಡು ಶಿಕ್ಷಕ ವೃತ್ತಿಯ ಮಹತ್ವ ಸಾರಬೇಕು ಎಂದರು.

ಅಸ್ಜಾದ, ಸೃಷ್ಟಿ ತೀರ್ಥಗೌಡರ, ಶ್ರದ್ಧಾ ಸಿ.ಟಿ. ಮಾತನಾಡಿದರು. ಸಂಸ್ಥೆಯ ನಿರ್ದೇಶಕರಾದ ಜಿ.ಬಿ. ಕುಲಕರ್ಣಿ, ರಾಘವೇಂದ್ರ ಆನೆಗುಂದಿ, ಮುಖ್ಯೋಪಾಧ್ಯಾಯ ಡಾ. ವೈ.ಪಿ. ಕಲ್ಲನಗೌಡರ, ಪ್ರಾಚಾರ್ಯ ಎಸ್.ಜಿ. ಜಕ್ಕಲಿ ಇತರರು ಇದ್ದರು. ಗುರುದೇವ ಇಂಗಳಳ್ಳಿ ಸ್ವಾಗತಿಸಿದರು. ಸಂಜನಾ ಬೆಲ್ಲದ ನಿರೂಪಿಸಿದರು. ಶ್ರದ್ಧಾ ಪಟ್ಟಣಶೆಟ್ಟಿ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net