ಬಸ್ ಚರಂಡಿಗೆ, ಪ್ರಯಾಣಿಕರು ಪಾರು

Sul_Bus-in-drain
Published on

ಸುಳ್ಯ: ಪೆರಾಜೆಯ ಕಲ್ಬರ್ಪೆ ಬಳಿ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ರಸ್ತೆ ಬದಿಯ ಚರಂಡಿಗೆ ಇಳಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

ಮಂಗಳೂರಿನಿಂದ ಮಂಡ್ಯಕ್ಕೆ ಹೋಗುತ್ತಿದ್ದ ಬಸ್ ಕಲ್ಚರ್ಪೆ ಬಳಿ ತಿರುವಿನಲ್ಲಿ ಎದುರುಗಡೆಯಿಂದ ಬರುತ್ತಿದ್ದ ಲಾರಿಗೆ ಸೈಡ್ ಕೊಡಲು ಹೋದಾಗ ಚಾಲಕನ ನಿಯಂತ್ರಣ ತಪ್ಪಿ ಈ ಘಟನೆ ಉಂಟಾಗಿದೆ ಎನ್ನಲಾಗಿದೆ. ಬಸ್ಸಿನಲ್ಲಿ 24 ಪ್ರಯಾಣಿಕರಿದ್ದು ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆ ಬಳಿಕ ಪ್ರಯಾಣಿಕರನ್ನು ಬೇರೆ ಬಸ್‌ನಲ್ಲಿ ಕಳುಹಿಸಿಕೊಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net