ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬಸ್

MDG bus
ಬಿಳಗುಳದಲ್ಲಿ ಖಾಸಗಿ ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಮುರಿದು ಬಿದ್ದಿರುವುದು.
Published on

ಮೂಡಿಗೆರೆ: ಬೆಂಗಳೂರಿನಿಂದ ಕೊಟ್ಟಿಗೆಹಾರಕ್ಕೆ ಸಂಚರಿಸುತ್ತಿದ್ದ ಖಾಸಗಿ ಬಸ್ ಭಾನುವಾರ ಬೆಳಗ್ಗೆ ಬಿಳಗುಳದಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಕ್ಷಣ ವಿದ್ಯುತ್ ಸಂಚಾರ ಸ್ಥಗಿತಗೊಂಡ ಕಾರಣ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಳಗ್ಗೆ ಸ್ಥಳದಲ್ಲಿ ಹೆಚ್ಚಿನ ಜನ ಸಂಚಾರವಿಲ್ಲದ ಕಾರಣ ದೊಡ್ಡ ಅನಾಹುತ ತಪ್ಪಿದೆ. ಎರಡು ವಿದ್ಯುತ್ ಕಂಬಗಳಿಗೆ ಬಸ್ ಡಿಕ್ಕಿ ಹೊಡೆದಿದ್ದು, ಎರಡೂ ಕಂಬಗಳು ತುಂಡಾಗಿ ಬಸ್ ಮೇಲೆ ಬಿದ್ದಿವೆ. ಬಸ್‌ನಲ್ಲಿದ್ದ ಹಲವರಿಗೆ ಸಣ್ಣಪುಟ್ಟ ಗಾಯವಾಗಿವೆ. ಧರ್ಮಸ್ಥಳ ಶೌರ್ಯ ಮತ್ತು ವಿಪತ್ತು ತಂಡದ ಸದಸ್ಯರು ಮತ್ತು ತುರ್ತು ಸಹಾಯದ ಪೊಲೀಸರು ಬಸ್‌ನಲ್ಲಿದ್ದ ಪ್ರಯಾಣಿಕರನ್ನು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದರು.ಬೆಳಗಿನ ಜಾವ ಮಂಜು ಕವಿದ ವಾತಾವರಣದಿಂದ ರಸ್ತೆ ಸರಿಯಾಗಿ ಕಾಣದೆ ಅಥವಾ ಬಸ್ ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ ಅಘಾತವಾಗಿರಬಹುದು ಎಂದು ಶಂಕಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net