

ಬಂಟ್ವಾಳ: ಕಾವಳಪಡೂರು ಗ್ರಾಮದ ವಗ್ಗ ಸಮೀಪದ ಉಗ್ಗಬೆಟ್ಟು ಎಂಬಲ್ಲಿ ಕೆಎಸ್ಆರ್ಟಿಸಿ ಬಸ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ಗುರುವಾರ ರಾತ್ರಿ ನಡೆದಿದೆ.
ಗಾಯಾಳುವನ್ನು ವೇಣೂರು ಪೆರಿಂಜೆಯ ಗೋಪಾಲ ಪೂಜಾರಿ ಎಂದು ಗುರುತಿಸಲಾಗಿದೆ.
ಬಸ್ ಧರ್ಮಸ್ಥಳದಿಂದ ಮಂಗಳೂರು ಕಡೆಗೆ ಬರುತ್ತಿದ್ದು ಗೋಪಾಲ ಪೂಜಾರಿಯವರು ಬೈಕಿನಲ್ಲಿ ಮೂರ್ಜೆ ಕಡೆಗೆ ತೆರಳುವ ವೇಳೆ ಈ ಅಪಘಾತ ಸಂಭವಿಸಿದೆ. ಗಾಯಾಳುವನ್ನು ಸ್ಥಳಿಯರು ಆಸ್ಪತ್ರೆಗೆ ಸಾಗಿಸಿದ್ದಾರೆ.