ಬಸ್ ಪಲ್ಟಿಯಾಗಿ ಹಲವರಿಗೆ ಗಾಯ

ACCIDENT
Published on

ಗಜೇಂದ್ರಗಡ: ಗಜೇಂದ್ರಗಡದಿಂದ ಗದಗ ಕಡೆಗೆ ಹೊರಟಿದ್ದ ಸಾರಿಗೆ ಸಂಸ್ಥೆಯ ಬಸ್ಸೊಂದು ಕೊಡಗಾನೂರು ಸಮೀಪ ಗುರುವಾರ ಪಲ್ಟಿಯಾಗಿದ್ದರಿಂದ 20-25 ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಒಬ್ಬ ಅಜ್ಜಿಯ ಸ್ಥಿತಿ ಗಂಭೀರವಾಗಿದ್ದು ಗಾಯಗೊಂಡವರನ್ನು ಗದಗ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಘಟನೆ ನಡೆದ ಕೆಲವೇ ಹೊತ್ತಿನಲ್ಲಿ ಮೂರು ಆಂಬುಲೆನ್ಸ್‌ಗಳು ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನ ಆಸ್ಪತ್ರೆಗೆ ರವಾನಿಸಲಾಯಿತು.

ಕೊಡಗಾನೂರು ಬಳಿ ಆಗಾಗ ಅಪಘಾತಗಳು ಸಂಭವಿಸುತ್ತಲೇ ಇರುತ್ತವೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಮುಂಜಾಗ್ರತೆ ವಹಿಸಿ ನಾಮಫಲಕ ಅಳವಡಿಸಬೇಕು. ಜತೆಗೆ ಈ ಭಾಗದಲ್ಲಿ ಸಂಚರಿಸುವ ವಾಹನ ಸವಾರರು ಕೂಡ ತುಂಬಾ ಜಾಗರೂಕತೆಯಿಂದ ಸಂಚರಿಸಬೇಕು ಎನ್ನುತ್ತಾರೆ ಸ್ಥಳೀಯರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net