ಬಸ್ ನಿಲ್ದಾಣ ರಸ್ತೆ ಕೆಸರುಮಯ

11BTP002
ಬೆಟ್ಟದಪುರ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ರಸ್ತೆಯು ಗುಂಡಿಗಳಿಂದ ಕೂಡಿ, ಕೆಸರುಮಯವಾಗಿರುವುದು.
Published on

ಬೆಟ್ಟದಪುರ: ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣಕ್ಕೆ ಪ್ರವೇಶಿಸುವ ರಸ್ತೆಯು ಗುಂಡಿಗಳಿಂದ ಕೂಡಿ, ಕೆಸರುಮಯವಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ಬೆಟ್ಟದಪುರ ವ್ಯಾಪ್ತಿಯಲ್ಲಿ ಜಿಟಿಜಿಟಿ ಮಳೆ ಆರಂಭವಾದ ಪರಿಣಾಮ ಇಲ್ಲಿನ ಬಸ್ ನಿಲ್ದಾಣಕ್ಕೆ ಪ್ರವೇಶ ಮಾಡುವ ಒಂದು ಭಾಗದ ರಸ್ತೆಯಲ್ಲಿ ಬಾಯ್ತೆರೆದಿದ್ದ ಗುಂಡಿಯಲ್ಲಿ ಮಳೆಯ ನೀರು ತುಂಬಿಕೊಂಡಿದೆ. ಇದಲ್ಲದೆ ನಿತ್ಯ ಬಸ್‌ಗಳ ಮತ್ತು ಖಾಸಗಿ ವಾಹನಗಳ ಸಂಚಾರದಿಂದ ಪ್ರವೇಶ ಸ್ಥಳವು ಸಂಪೂರ್ಣ ಕೆಸರುಮಯವಾಗಿದೆ. ಈ ಪರಿಣಾಮ ಬಸ್ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರು, ಸ್ಥಳೀಯರು, ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ. ಸಮಸ್ಯೆ ಬಗ್ಗೆ ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಗಮನಹರಿಸಿ, ಕೂಡಲೇ ಬಗೆಹರಿಸಬೇಕೆಂದು ಸ್ಥಳೀಯರಾದ ನಮೋ ಮಲ್ಲೇಶ್, ಮೈಲಾರಿ, ಕಾರ್ತಿಕ್, ಮಂಜುನಾಥ್, ಕುಮಾರ, ಗಿರೀಶ್ ಒತ್ತಾಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net