ಉದ್ಯಮಿ ಮೇಲೆ ದುಷ್ಕರ್ಮಿಗಳಿಂದ ಗುಂಡಿನ ದಾಳಿ

Screenshot_2025-01-10-13-14-01-91.jpg
Published on

ಬೆಳಗಾವಿ: ಕಾರಿನಲ್ಲಿ ಹೋಗುತ್ತಿದ್ದ ಉದ್ಯಮಿ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ಮಾಡಿರುವ ಘಟನೆ ಬೆಳಗಾವಿಯ ಗಣೇಶಪುರದ ಹಿಂದು ನಗರದ ರಸ್ತೆಯಲ್ಲಿ ಗುರುವಾರ ತಡರಾತ್ರಿ ನಡೆದಿದೆ.

ರಿಯಲ್ ಎಸ್ಟೇಟ್ ಉದ್ಯಮಿ, ಶಾಹುನ ನಗರದ ನಿವಾಸಿ ಪ್ರಪುಲ್ ಬಾಲಕೃಷ್ಣ ಪಾಟೀಲ (30) ಎಂಬವರ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದಾರೆ. ಕಾರಿನ ಗ್ಲಾಸ್‌ಗೆ ಗುಂಡು ತಗುಲಿದ್ದು, ಪ್ರಪುಲ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಕಾರಿನ ಗಾಜು ಪ್ರಪುಲ್ ಅವರ ತಲೆ, ಮುಖಕ್ಕೆ ಸಿಡಿದು ಗಾಯವಾಗಿದೆ. ತಕ್ಷಣ ಅವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನಾ ಸ್ಥಳಕ್ಕೆ ಬೆಳಗಾವಿ ಗ್ರಾಮೀಣ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದ್ದಾರೆ. ಎರಡು ಸುತ್ತು ಗುಂಡಿನ ದಾಳಿ ನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ದಾಳಿ ಮಾಡಿದವರು ಯಾರು? ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದು ತನಿಖೆಯಿಂದಲೇ ಗೊತ್ತಾಗಬೇಕಿದೆ. ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net