

ಬೆಂಗಳೂರು: ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ವ್ಹೀಲಿಂಗ್ ಮಾಡಿದ್ದ ಸವಾರನನ್ನು ತಲಘಟ್ಟಪುರ ಸಂಚಾರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಎಸ್.ಆರ್.ಚೇತನ್(೨೦) ಬಂಧಿತ.
ಆರೋಪಿಯು ಇತ್ತೀಚೆಗೆ ಸೋಂಪುರ ಕ್ಲೋವರ್ ಲೀಫ್ ಚೆನ್ನವೀರನಪಾಳ್ಯದ ಕಡೆಗೆ ಹೋಗುವ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನದಲ್ಲಿ ಅಪಾಯಕಾರಿಯಾಗಿ ವ್ಹೀಲಿಂಗ್ ಮಾಡುವ ಫೋಟೋವನ್ನು ಸೆರೆ ಹಿಡಿದ ಸಾರ್ವಜನಿಕರು ಅದನ್ನು ಹಿರಿಯ ಅಧಿಕಾರಿಗಳಿಗೆ ವಾಟ್ಸ್‌ಆ್ಯಪ್ ಮುಖಾಂತರ ಕಳುಹಿಸಿದ್ದರು. ಈ ಫೋಟೋದಲ್ಲಿನ ದ್ವಿಚಕ್ರ ವಾಹನದ ನೋಂದಣಿ ಸಂಖ್ಯೆ ಆಧರಿಸಿ ದ್ವಿಚಕ್ರ ವಾಹನವನ್ನು ಪತ್ತೆ ಹಚ್ಚಿ ಅದರ ಸವಾರನನ್ನು ಬಂಧಿಸಲಾಗಿದೆ. ಈ ಸಂಬಂಧ ತಲಘಟ್ಟಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.