

ಚಿಕ್ಕಮಗಳೂರು: ಧಾರಾಕಾರವಾಗಿ ಸುರಿಯುತ್ತಿದ್ದ ಮಳೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಕಾರು ರಸ್ತೆ ಪಕ್ಕದಲ್ಲಿದ್ದ ಮನೆಯ ಕಾಂಪೌಂಡ್ ಗೆ ಡಿಕ್ಕಿಯಾಗಿ ಮನೆ ಅಂಗಳಕ್ಕೆ ಉರುಳಿ ಬಿದ್ದ ಘಟನೆ ತಾಲೂಕಿನ ಮಲ್ಲೇನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮಲ್ಲೇನಹಳ್ಳಿ ಗ್ರಾಮದಿಂದ ಚಿಕ್ಕಮಗಳೂರಿಗೆ ತೆರಳುತ್ತಿದ್ದ ಕಾರು ರಸ್ತೆ ಪಕ್ಕದಲ್ಲಿದ್ದ ಕಾಂಪೌಂಡ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಕಾಂಪೌಂಡ್ ಗೋಡೆ ಸಂಪರ‍್ಣ ಕುಸಿದು ಬಿದ್ದು ಕಾರು ಮನೆಯ ಅಂಗಳಕ್ಕೆ ಬಂದು ಬಿದ್ದಿದೆ. ಅದೃಷ್ಟವಶಾತ್ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಚಿಕ್ಕಮಗಳೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.