ಪ್ರಪಾತಕ್ಕೆ ಉರುಳಿದ ಕಾರು

12 ckm 2
The car fell into the abyss
Published on

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ತಿರುವು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಪ್ರಪಾತಕ್ಕೆ ಉರುಳಿದ ಪರಿಣಾಮ ಐವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿವೆ. ಕಾರು ಸಿನಿಮೀಯ ರೀತಿಯಲ್ಲಿ ೨೫೦ ಅಡಿ ಆಳದ ಪ್ರಪಾತಕ್ಕೆ ಉರುಳಿದೆ.

ಮುಳ್ಳಯ್ಯನಗಿರಿಯಲ್ಲಿ ತಪ್ಪಲಿನಲ್ಲಿ ಸುಮಾರು ೨೫೦ ಅಡಿ ಎತ್ತರದ ಪ್ರದೇಶದಿಂದ ಕಾರೊಂದು ಕೆಳಗೆ ಬಿದ್ದಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಹೈದರಾಬಾದ್ ಮೂಲದ ಪ್ರಯಾಣಿಕರಿದ್ದ ಕಾರು ಪ್ರಪಾತಕ್ಕೆ ಬಿದ್ದಿದೆ.
ಚಿಕ್ಕಮಗಳೂರು ತಾಲೂಕಿನ ಮುಳ್ಳಯ್ಯನಗಿರಿ ಸಮೀಪದ ಕವಿಕಲ್ ಗಂಡಿ ಬಳಿ ಘಟನೆ ನಡೆದಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರಿಗೂ ಗಂಭೀರ ಗಾಯಗಳಾಗಿದ್ದು, ಎಲ್ಲರನ್ನೂ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬರೋಬ್ಬರಿ ೨೫೦ ಅಡಿ ಎತ್ತರದಿಂದ ಬೀಳುವಾಗ ಮರಗಳು ಹಾಗೂ ರೆಂಬೆ ಕೊಂಬೆಗಳಿಗೆ ಸಿಲುಕಿದ್ದರಿಂದಾಗಿ ಕಾರು ಕೆಳಗೆ ಬೀಳುವ ವೇಗ ಕಡಿಮೆಯಾಗಿದೆ. ಇದರಿಂದಾಗಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ. ಸ್ಥಳಕ್ಕೆ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್ಪೆಕ್ಟರ್ ಸಚಿನ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net