ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿ

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು ಪಲ್ಟಿ
Published on

ಬೈಲಕುಪ್ಪೆ: ಇಲ್ಲಿನ ಬಿ.ಎಂ. ರಸ್ತೆಯಲ್ಲಿ ಶನಿವಾರ ರಾತ್ರಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ.

ಪಿರಿಯಾಪಟ್ಟಣದಿಂದ ಕುಶಾಲನಗರ ಕಡೆ ಚಲಿಸುತ್ತಿದ್ದ ಕಾರು ಬೈಲಕುಪ್ಪೆ ಬಿಎಂ ರಸ್ತೆಯಲ್ಲಿ ಡಿವೈಡರ್‌ಗೆ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಕಾರಿನಲ್ಲಿ ಚಾಲಕ ಸೇರಿದಂತೆ ಮೂವರು ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಕುಶಾಲನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಮಡಿಕೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಯಾವುದೇ ಪ್ರಕರಣ ದಾಖಲಾಗಿಲ್ಲ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net