ಕಾರು ಪಲ್ಟಿ ದಂಪತಿ ಪಾರು

7kglphoto-6,
Published on

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಧನಗೆರೆ ಗ್ರಾಮದ ಹೆದ್ದಾರಿಯಲ್ಲಿ (209) ಚಲಿಸುತ್ತಿದ್ದ ಕಾರೊಂದು ಆಯಾತಪ್ಪಿ ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದ ದಂಪತಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.


ಬೆಂಗಳೂರು ಮೂಲದ ಸಂಜಯ್‌ಕುಮಾರ್ ಮತ್ತು ಮನುಶ್ರೀ ದಂಪತಿ ಬಿಆರ್‌ಟಿ ಅರಣ್ಯ ಪ್ರದೇಶದ ಕೆ.ಗುಡಿಗೆ ಶನಿವಾರ ತೆರಳಿದ್ದರು. ಅಲ್ಲಿಂದ ವಾಪಸ್ ಬೆಂಗಳೂರಿಗೆ ಪ್ರಯಾಣಿಸುತ್ತಿರುವಾಗ ಧನಗೆರೆ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ ಯಾಗಿದೆ. ಕಾರಿನ ಮುಂಭಾಗ ಜಖಂಗೊಂಡಿದೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲಿಸಿದರು. ಪಲ್ಟಿಯಾದ ಕಾರನ್ನು ರಸ್ತೆ ಬದಿಗೆ ಸ್ಥಳಾಂತರ ಮಾಡಲಾಗಿದೆ. ಅಪಘಾತಕ್ಕೀಡಾದವರಿಂದ ಪೊಲೀಸರು ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net