ರಸ್ತೆ ಕಾಣದೆ ಕಂದಕಕ್ಕೆ ಉರುಳಿದ ಕಾರು

bnk car
ಬಣಕಲ್ ಸಮೀಪ ಕಂದಕಕ್ಕೆ ಉರುಳಿದ ಕಾರು.
Published on

ಬಣಕಲ್: ಪಟ್ಟಣದಲ್ಲಿ ಮಂಗಳವಾರ ಸಂಜೆ ಭಾರಿ ಮಳೆಯಾಗಿ ರಸ್ತೆಯಲ್ಲಿ ನೀರು ತುಂಬಿಕೊಂಡಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿದ ಕಾರು ತಗ್ಗಿನ ಪ್ರದೇಶಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ರಸ್ತೆಯಲ್ಲಿ ಮಳೆನೀರು ಹರಿಯುತ್ತಿದ್ದರಿಂದ ಚಾಲಕನಿಗೆ ಸರಿಯಾಗಿ ಕಾಣದೆ ನಿಯಂತ್ರಣ ತಪ್ಪಿದ್ದರಿಂದ ಕಾರು ತಗ್ಗಿನ ಪ್ರದೇಶಕ್ಕೆ ಉರುಳಿತು. ಸ್ಥಳೀಯರ ಸಹಕಾರದಿಂದ ಕಾರನ್ನು ಎತ್ತಲಾಯಿತು.
ಮತ್ತೊಂದು ಪ್ರಕರಣದಲ್ಲಿ ಚಾರ್ಮಾಡಿ ಘಾಟ್‌ನ ಎರಡನೇ ತಿರುವಿನಲ್ಲಿ ಕಾರು ಮತ್ತು ಗೂಡ್ಸ್ ವಾಹನ ಡಿಕ್ಕಿ ಹೊಡೆದುಕೊಂಡಿದ್ದು, ಕಾರಿನ ಪ್ರಯಾಣಿಕರಿಗೆ ಸಣ್ಣ ಗಾಯಗಳಾಗಿವೆ. ಮಂಗಳೂರು ಕಡೆಗೆ ಸಾಗುತ್ತಿದ್ದ ಕಾರು ಮತ್ತು ಮಹಾರಾಷ್ಟ್ರ ಕಡೆಗೆ ಸಾಗುತ್ತಿದ್ದ ಗೂಡ್ಸ್ ವಾಹನ ಡಿಕ್ಕಿ ಹೊಡೆದುಕೊಂಡಿವೆ. ಗಾಯಾಳುಗಳನ್ನು ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net