ನ್ಯಾಯ ಕೊಡಿಸುವ ದೃಷ್ಟಿಯಿಂದ ಪ್ರಕರಣ ವಾಪಸ್

D.K.Shivakumar 01
Published on

ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಪೊಲೀಸರು ರಾಜಕೀಯ ಒತ್ತಡಕ್ಕೆ ಮಣಿದು ಅಮಾಯಕರ ಮೇಲೆ ಪ್ರಕರಣ ದಾಖಲಿಸಿದ್ದರು. ಅವರಿಗೆ ನ್ಯಾಯ ಕೊಡಿಸುವ ದೃಷ್ಟಿಯಿಂದ ಸಂಪುಟ ಸಭೆಯಲ್ಲಿ ಪ್ರಕರಣ ಖುಲಾಸೆಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಹೇಳಿದರು.
ನಗರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಲಭೆ ಪ್ರಕರಣದಲ್ಲಿ ಕೆಲವರ ಮೇಲೆ ಅನಗತ್ಯವಾಗಿ ಸುಳ್ಳು ಕೇಸ್ ದಾಖಲಿಸಲಾಗಿತ್ತು. ಅದರಲ್ಲಿ ಅನೇಕರು ನಿರಪರಾಧಿಗಳು ಎಂದು ನಮಗೆ ತಿಳಿದಿತ್ತು. ಹೀಗಾಗಿ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ದಾಗ ಆರ್‌ಎಸ್‌ಎಸ್, ಭಜರಂಗದಳ ಹಾಗೂ ಅವರ ಬೆಂಬಲಿಗರ ಮೇಲಿದ್ದ ಹಲವು ಪ್ರಕರಣ ವಾಪಸ್ ಪಡೆದಿದ್ದಾರೆ. ಅದರ ಪಟ್ಟಿಯೂ ನಮ್ಮ ಬಳಿ ಇದೆ. ನೊಂದವರಿಗೆ ನ್ಯಾಯ ಒದಗಿಸುತ್ತಿದ್ದೇವೆಯೇ ಹೊರತು ರಾಜಕೀಯ ಮಾಡುತ್ತಿಲ್ಲ. ಬಿಜೆಪಿ ಪ್ರತೀ ಹಂತದಲ್ಲೂ ರಾಜಕೀಯ ಮಾಡುವುದನ್ನು ಬಿಟ್ಟುಬಿಡಬೇಕು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net