

ಲಿಂಗಸುಗೂರು: ರಾಜ್ಯ ಸರ್ಕಾರ ಜಾತಿ ಗಣತಿ ಹೆಸರಿನಲ್ಲಿ ಹಿಂದು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ವೀರನಗೌಡ ಪಾಟೀಲ್ ಲೆಕ್ಕಿಹಾಳ ಆರೋಪಿಸಿದರು.
ಪಟ್ಟಣದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸರ್ಕಾರ ಹಿಂದುಳಿದ ವರ್ಗಗಳ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮೂಲಕ ಕುರುಬ ಕ್ರಿಶ್ಚಿಯನ್, ಲಿಂಗಾಯತ ಕ್ರಿಶ್ಚಿಯನ್, ಒಕ್ಕಲಿಗ ಕ್ರಿಶ್ಚಿಯನ್, ಬ್ರಾಹ್ಮಣ ಕ್ರಿಶ್ಚಿಯನ್, ಮಡಿವಾಳ ಕ್ರಿಶ್ಚಿಯನ್, ನೇಕಾರ ಕ್ರಿಶ್ಚಿಯನ್ ಸೇರಿ 48 ಅನಧಿಕೃತ ಕ್ರಿಶ್ಚಿಯನ್ ಜಾತಿಗಳನ್ನು ಸೇರಿಸಿರುವುದು ಖಂಡನೀಯ.
ಜನರ ಭಾವನೆಗಳ ಜತೆಗೆ ಚೆಲ್ಲಾಟ ಆಡುತ್ತಿರುವ ಧೋರಣೆಯನ್ನು ಸಿಎಂ ನಿಲ್ಲಿಸಬೇಕು. ದೋಷಪೂರಿತ ಜಾತಿ ಪಟ್ಟಿ ಸರಿಪಡಿಸಬೇಕು. ಹಿಂದು ಸಮಾಜ ಒಡೆಯುವ, ಕ್ರೈಸ್ತ ಮಿಷನರಿಗಳ ಬಲವಂತದ ಮತಾಂತರ ಕೆಲಸಕ್ಕೆ ಪ್ರೋತ್ಸಾಹ ನೀಡಬಾರದು. ಸಮೀಕ್ಷೆ ಸಿಬ್ಬಂದಿಗೆ ತರಬೇತಿ ಕೊಟ್ಟು ವೈಜ್ಞಾನಿಕವಾಗಿ ಜಾತಿ ಸಮೀಕ್ಷೆ ನಡೆಸಬೇಕೆಂದು ವೀರನಗೌಡ ಪಾಟೀಲ್ ಲೆಕ್ಕಿಹಾಳ ತಿಳಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಕೆ.ನಾಗಭೂಷಣ, ಪ್ರಧಾನ ಕಾರ್ಯದರ್ಶಿ ಮಂಜುನಾಥ ಪಾಟೀಲ್, ಗಿರಿಮಲ್ಲನಗೌಡ ಕರಡಕಲ್ಲ, ಲಿಂಗರಾಜ ಸಾಹುಕಾರ ಇದ್ದರು.