ಕಾರ್ಮಿಕರ ಸಂಕಷ್ಟಕ್ಕೆ ಕೇಂದ್ರ ಸರ್ಕಾರವೇ ಹೊಣೆ

9Kgfph-1
???????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????
Published on

ಕೆಜಿಎಫ್​- ಕೇಂದ್ರ ಸರ್ಕಾರ ಕಾರ್ಮಿಕ ವಿರೋಧಿ, ರೈತ ವಿರೋಧಿ ನೀತಿಗಳನ್ನು ಜಾರಿಗೊಳಿಸಿರುವುದರಿಂದ ದೇಶದಲ್ಲಿ ಕಾರ್ಮಿಕರು, ರೈತರು ಅಂಧಕಾರದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಿಐಟಿಯು ಮುಖಂಡ ಎ.ಆರ್​.ಬಾಬು ಹೇಳಿದರು.

ನಗರದ ಅಂಚೆ ಕಚೇರಿ ಮುಂಭಾಗ ಬುಧವಾರ ಕೇಂದ್ರದ ವಿರೋಧಿ ನೀತಿಗಳನ್ನು ಖಂಡಿಸಿ ಬೆಮೆಲ್​ ಹೊರ ಗುತ್ತಿಗೆ ಕಾರ್ಮಿಕ ಸಂಘಟನೆ, ಅಂಗನವಾಡಿ ಕಾರ್ಯಕರ್ತರು ಸೇರಿ ವಿವಿಧ ಕಾರ್ಮಿಕ ಸಂಘಟನೆಗಳು ಹಮ್ಮಿಕೊಂಡಿದ್ದ ಮುಷ್ಕರದಲ್ಲಿ ಮಾತನಾಡಿದರು.

ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನುಖಂಡಿಸಿ ದೇಶಾದ್ಯಂತ ವಿವಿಧ ಕಾರ್ಮಿಕ ಸಂಘಟನೆಗಳು ಮುಷ್ಕರ ನಡೆಸುತ್ತಿದ್ದಾರೆ. ಕೆಜಿಎಫ್​ ತಾಲೂಕಿನಲ್ಲೂ ಬಿಇಎಂಎಲ್​ ಹೊರ ಗುತ್ತಿಗೆ ನೌಕರರು, ಅಂಗನವಾಡಿ ಶಿಕ್ಷಕರು, ಮನೆಗೆಲಸದವರು ಸೇರಿ ವಿವಿಧ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ ನಡೆಸುತ್ತಿದ್ದು, ದೇಶದ ಬೆನ್ನೆಲುಬು ಎನ್ನಿಸಿಕೊಂಡಿರುವ ರೈತ ಹಾಗೂ ದೇಶದ ಅಭಿವೃದ್ಧಿಯಲ್ಲಿ ತನ್ನದೆ ಆದ ಕೊಡುಗೆ ನೀಡುತ್ತಿರುವ ಕಾರ್ಮಿಕ ವರ್ಗ ಸಂಕಷ್ಟದಲ್ಲಿ ಸಿಲುಕುವಂತಾಗಿದೆ. ಸಮಾನ ನೌಕರಿಗೆ ಸಮಾನ ವೇತನ ನೀಡಬೇಕು ಎಂಬ ಬೆೇಡಿಕೆಗಳನ್ನು ಮುಂದಿಡಲಾಗಿದೆ ಎಂದರು.

ಕಾರ್ಮಿಕ ಮುಖಂಡರಾದ ಶಿವ, ರಾಜನ್​ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net