ರೈತರಿಗೆ ಕೇಂದ್ರ ಸರ್ಕಾರ ವಿಶೇಷ ಸೌಲಭ್ಯ ಒದಗಿಸಲಿ

IMG-20241206-WA0340
ಅರಸೀಕೆರೆ ತಾಲೂಕಿನ ಬಾಣಾವರ ಪಟ್ಟಣದಲ್ಲಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನೂತನವಾಗಿ ನಿರ್ಮಾಣ ಮಾಡಿರುವ ಕಟ್ಟಡವನ್ನು ಶಾಸಕ ಶಿವಲಿಂಗೇಗೌಡ ಉದ್ಘಾಟಿಸಿದರು. ಬಂಡಿಗೌಡ ರಾಜಣ್ಣ, ವೀಣಾ, ಚಂದ್ರಪ್ಪ, ಅಶೋಕ್, ಶ್ರೀನಿವಾಸ್, ಕೃಷ್ಣಮೂರ್ತಿ, ಲಕ್ಷ್ಮೀಶ, ಇಮ್ರಾನ್, ಆಸಿಫ್, ಭಾಗ್ಯಮ್ಮ, ಶ್ರೀಧರ, ಸುರೇಶ್ ಇದ್ದರು.
Published on

ಅರಸೀಕೆರೆ ಗ್ರಾಮಾಂತರ: ಕೇಂದ್ರ ಸರ್ಕಾರದ ಸಾಲ ಸೌಲಭ್ಯದಿಂದ ರೈತರು ವಂಚಿತರಾಗಿದ್ದು ಇನ್ನಾದರೂ ವಿಶೇಷ ಸೌಲಭ್ಯವನ್ನು ಒದಗಿಸಲಿ ಎಂದು ಗೃಹ ಮಂಡಳಿಯ ಅಧ್ಯಕ್ಷ ಹಾಗೂ ಶಾಸಕ ಕೆ.ಎಂ.ಶಿವಲಿಂಗೇಗೌಡ ಆಗ್ರಹಿಸಿದರು.

ಬಾಣಾವರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ನಿರ್ಮಿಸಲಾಗಿರುವ ಸಂಘದ ನೂತನ ಗೋದಾಮು ಕಟ್ಟಡವನ್ನು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. ಬಾಣಾವರ ಹೋಬಳಿ ಕೇಂದ್ರವಾಗಿದ್ದು, ಇದನ್ನು ಪಟ್ಟಣ ಪಂಚಾಯಿತಿ ಕೇಂದ್ರವಾಗಿಸಲು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಮುಂದಿನ ದಿನಗಳಲ್ಲಿ ಅದು ನೆರವೇರಲಿದೆ ಎಂದರು.

ಸಂಘದ ಅಧ್ಯಕ್ಷ ಟಿ.ಜಿ.ಚಂದ್ರಪ್ಪ ಮಾತನಾಡಿ, ನಮ್ಮ ಸಂಘದ ವತಿಯಿಂದ ರೈತರಿಗೆ, ಬೆಳೆ ಹಾಗೂ ದೀರ್ಘಾವಧಿ ಮತ್ತು ಅಲ್ಪಾವಧಿ ಸಾಲ ನೀಡುವಲ್ಲಿ ಯಶಸ್ವಿ ಸಾಧಿಸಿದ್ದೇವೆ. ಕೆಲವು ಸಮಸ್ಯೆಗಳನ್ನು ಶಾಸಕರು ಪರಿಹರಿಸಲಿದ್ದಾರೆ ಎಂದು ಹೇಳಿದರು.

ಗ್ರಾಪಂ ಅಧ್ಯಕ್ಷೆ ವೀಣಾ, ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಬಂಡಿಗೌಡರ ರಾಜಣ್ಣ, ಜಿ.ಪಂ ಮಾಜಿ ಉಪಾಧ್ಯಕ್ಷ ಬಿಳಿಚೌಡಯ್ಯ, ಜಿ.ಪಂ. ಮಾಜಿ ಸದಸ್ಯ ಅಶೋಕ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ನಿರ್ದೇಶಕರಾದ ಕೃಷ್ಣಮೂರ್ತಿ, ಆರೀಫ್ ಜಾನ್, ಮುಖಂಡರಾದ ಜಯಣ್ಣ, ಶ್ಯಾನೆಗೆರೆ ಬಾಬು, ಬಸವರಾಜು, ಮಹೇಶ್ ಇಮ್ರಾನ್, ಆಸಿಫ್, ಲಕ್ಷ್ಮೀಶ್ ಹಾಗೂ ಸಂಘದ ನಿರ್ದೇಶಕರು, ಗ್ರಾ.ಪಂ. ಸದಸ್ಯರಾದ ಸುರೇಶ, ಭಾಗ್ಯಮ್ಮ, ಶ್ರೀಧರ್ ಹಾಗೂ ರೈತರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net