

ವಿಜಯಪುರ: ರಾಜ್ಯದಲ್ಲಿ ಪ್ರಸ್ತುತ ಸಿದ್ದರಾಮಯ್ಯ ಸಿಎಂ ಆಗಿದ್ದಾರೆ. ಹೀಗಾಗಿ ಆ ಹುದ್ದೆ ಖಾಲಿ ಇಲ್ಲವಾದ್ದರಿಂದ ಸಿಎಂ ಬದಲಾವಣೆ ವಿಚಾರ ಅಪ್ರಸ್ತುತ. ಅಂಥ ಯಾವುದೇ ಚರ್ಚೆ ಪಕ್ಷದ ಆಂತರಿಕ ವಲಯದಲ್ಲೂ ಇಲ್ಲ ಎಂದು ಆರೋಗ್ಯ ಸಚಿವ ದಿನೇಶ ಗುಂಡುರಾವ ಪ್ರತಿಕ್ರಿಯಿಸಿದರು.
ಶುಕ್ರವಾರ ಕಾಯಕಲ್ಪ ಪ್ರಶಸ್ತಿ ವಿಜೇತ ವಿಜಯಪುರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ಬಳಿಕ ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.
ಸಿಎಂ ಬದಲಾವಣೆ ಚರ್ಚೆಯೇ ಇಲ್ಲ. ಸಾರ್ವಜನಿಕ ಚರ್ಚೆ ಆದರೆ ನಾವೇನೂ ಮಾಡೋದಕ್ಕೆ ಆಗಲ್ಲ. ಸಿದ್ದರಾಮಯ್ಯ ಒಳ್ಳೆಯ ಆಡಳಿತಗಾರರು. ಅವರು ಇದ್ದಾಗ ಬೇರೆ ಸಿಎಂ ಬಗ್ಗೆ ಮಾತಾನಾಡುವುದು ಎಷ್ಟು ಸರಿ..? ಸ್ವಾಮೀಜಿಗಳು ಏನು ಬೇಕಾದರೂ ಮಾತನಾಡಲಿ. ಅದಕ್ಕೆ ನಾವೇನೂ ಹೇಳಲು ಆಗಲ್ಲ ಎಂದರು.