ಸಂಕಷ್ಟ ನಿವಾರಣೆಗೆ ಪೂಜೆ ಸಲ್ಲಿಸಿ, ಪ್ರಾರ್ಥಿಸಿದ ಸಿಎಂ!

mysore
Published on

ಮೈಸೂರು: ಸಂಕಷ್ಟ ನಿವಾರಣೆಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡದೇವಿ ಚಾಮುಂಡೇಶ್ವರಿ ದೇವಿಯ ಸನ್ನಿಧಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದರು. ಅಲ್ಲದೆ, ಮನದಲ್ಲಿರುವ ಹರಕೆಯನ್ನೂ ತೀರಿಸಿ ಗಮನ ಸೆಳೆದರು.


ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆಗೂ ಮುನ್ನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಸಿಎಂ, ದೇವರ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ಈ ವೇಳೆ ಸಿದ್ದರಾಮಯ್ಯ ಹೆಸರಿನಲ್ಲಿ ಚಾಮುಂಡೇಶ್ವರಿ ದೇವಿಗೆ ವಿಶೇಷ ಪೂಜೆ ನೆರವೇರಿಸಲಾಯಿತು.

ಸಿದ್ದರಾಮಯ್ಯ ಹಣೆಗೆ ಅರ್ಚಕರು ಕುಂಕುಮ ಇಟ್ಟರು. ಬಳಿಕ ಚಾಮುಂಡೇಶ್ವರಿ ಪಾದುಕೆಗೆ ನಮಸ್ಕರಿಸಿದ ಸಿಎಂ, ಎದುರಾಗಿರುವ ಸಂಕಷ್ಟಗಳ ನಿವಾರಣೆಗೂ ಪ್ರಾರ್ಥಿಸಿಕೊಂಡರು. ಭಕ್ತಿಯಿಂದ ಚಾಮುಂಡೇಶ್ವರಿಗೆ ಪ್ರಾರ್ಥನೆ ಅರ್ಪಿಸಿದರು.


ನಂತರ ಗಣಪತಿ, ಆಂಜನೇಯ ಸೇರಿದಂತೆ ಇತರ ದೇವರ ಬಳಿಯೂ ಪ್ರಾರ್ಥಿಸಿದರು. ಬಳಿಕ ದೇಗುಲದ ಮುಂಭಾಗದಲ್ಲಿ ಈಡುಗಾಯಿ ಒಡೆದು ಹರಕೆಯನ್ನೂ ತೀರಿಸಿದರು. ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಈ ರೀತಿಯ ಪೂಜೆ, ಪುನಸ್ಕಾರವನ್ನು ಸಿದ್ದರಾಮಯ್ಯ ಈ ಹಿಂದೆ ಎಂದೂ ಮಾಡಿರಲಿಲ್ಲ. ಈ ಸಲದ ಪೂಜೆ ವಿಶೇಷ ಎನಿಸಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net