

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಸಿಎಂಗೆ ಮನವಿ ಸಲ್ಲಿಸಲು ನೂಕುನುಗ್ಗಲು ಉಂಟಾಗಿತ್ತು.
ನಗರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಸ್ತವ್ಯ ಹೂಡಿದ್ದರು. ಈ ಹಿನ್ನೆಲೆಯಲ್ಲಿ ಭೇಟಿಗಾಗಿ ಜಿಲ್ಲೆಯ ವಿವಿಧೆಡೆಯಿಂದ ಬಂದಿದ್ದ ಸಾರ್ವಜನಿಕರು ಅವರ ಮನೆ ಎದುರು ಜಮಾವಣೆಗೊಂಡಿದ್ದರು. ಸಿಎಂ ಮನೆಯಿಂದ ಹೊರಬರುವುದನ್ನೇ ಎದುರು ನೋಡುತ್ತಿದ್ದರು.
ಮನೆಯಿಂದ ಹೊರ ಬಂದ ಸಿಎಂ ಅವರು ನೇರವಾಗಿ ಸಾರ್ವಜನಿಕರ ಸಮಸ್ಯೆ ಆಲಿಸಿದರು. ಜನರಿಂದ ಮನವಿ ಪತ್ರಗಳನ್ನು ಸ್ವೀಕರಿಸಿದ ಅವರು, ಕೆಲ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಿದರು. ಉಳಿದ ಮನವಿಗಳನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಸಿಎಂ ನಿವಾಸದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.