ಜಾತಿ ಗಣತಿ ವರದಿ ಅನುಷ್ಠಾನ ವಿಚಾರ, ಸೂಕ್ತ ನಿರ್ಧಾರ ಕೈಗೊಳ್ಳುವಲ್ಲಿ ಸಿಎಂ ಸಮರ್ಥರು

IMG-20241017-WA0096.jpg
Published on

ಚಿಕ್ಕಬಳ್ಳಾಪುರ: ಜಾತಿ ಗಣತಿ ವರದಿಗೆ ಸಂಬಂಧಿಸಿದಂತೆ ಎಲ್ಲರ ಅಭಿಪ್ರಾಯವನ್ನು ಸ್ವೀಕರಿಸಿ, ಸೂಕ್ತ ನಿರ್ಧಾರವನ್ನು ಕೈಗೊಳ್ಳುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥರಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ ಎಂ.ಸಿ.ಸುಧಾಕರ್ ತಿಳಿಸಿದ್ದಾರೆ.

ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನೂ ವರದಿಯಲ್ಲೇನಿದೆ ಎಂಬುದೇ ಗೊತ್ತಿಲ್ಲ. ಇದರ ಬಗ್ಗೆ ಸ್ಪಷ್ಟವಾಗಿ ತಿಳಿಯಬೇಕಾಗಿದೆ. ಇನ್ನೂ ವೈಜ್ಞಾನಿಕ ರೀತಿಯಲ್ಲಿ ಇಲ್ಲ ಎಂಬ ಬಗ್ಗೆ ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಒಕ್ಕಲಿಗ ಜನಾಂಗದ ಜನಪ್ರತಿನಿಧಿಗಳು ಸಂಘದ ಮೂಲಕ ಪತ್ರವನ್ನು ನೀಡಿದ್ದಾರೆ. ಸಿಎಂ ಎಲ್ಲರ ಅಭಿಪ್ರಾಯವನ್ನು ಸ್ವೀಕರಿಸಿ, ಸೂಕ್ತ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.

ಒಳ ಮೀಸಲಾತಿಯ ವಿಚಾರವಾಗಿ ನ್ಯಾಯಾಲಯವು ತೀರ್ಪು ನೀಡಿದೆ. ಇದರ ಪ್ರಕಾರ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಯವುದು ಅನಿವಾರ್ಯ ಎಂದರು.

ಕರೊನಾ ಸಂದರ್ಭದಲ್ಲಿ ಎಂತಹ ಮನಸ್ಥಿತಿ ಇತ್ತು ಎಂಬುದು ಎಲ್ಲರಿಗೂ ಗೊತ್ತಿರುವ ವಿಚಾರ. ಶಿಷ್ಟಾಚಾರದಂತೆ ಸಂಸದರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತದೆ. ಬರುವುದು, ಬಿಡುವುದು ಅವರ ವೈಯಕ್ತಿಕ ವಿಚಾರ ಎಂದು ಸಚಿವರೊಂದಿಗೆ ಕಾರ್ಯಕ್ರಮದಲ್ಲಿ ಕೂರುವುದಿಲ್ಲ ಎಂಬುದಾಗಿ ಹೇಳಿಕೆ ನೀಡಿದ್ದ ಸಂಸದ ಡಾ ಕೆ.ಸುಧಾಕರ್ ಗೆ ಟಾಂಗ್ ನೀಡಿದರು. 

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net