ಕಾಲೇಜು ಕಟ್ಟಡ ಉದ್ಘಾಟನೆ 25ರಂದು

23 vikram 2
Published on

ವಿಜಯವಾಣಿ ಸುದ್ದಿಜಾಲ ಧಾರವಾಡ
ಇಲ್ಲಿನ ಕುಸುಮನಗರದಲ್ಲಿ ನಿರ್ಮಿಸಿರುವ ಸಿ.ವಿ. ರಾಮನ್​ ವಿಜ್ಞಾನ ಹಾಗೂ ವಾಣಿಜ್ಯ ಕಾಲೇಜಿನ ನೂತನ ಕಟ್ಟಡ ಉದ್ಘಾಟನೆ ಹಾಗೂ ಸ್ನೇಹ ಸಮ್ಮಿಲನ ಸಮಾರಂಭವನ್ನು ಆ. 25ರಂದು ಬೆಳಗ್ಗೆ 11 ಗಂಟೆಗೆ ಏರ್ಪಡಿಸಲಾಗಿದೆ ಎಂದು ಕಾಲೇಜಿನ ಪ್ರಾಚಾರ್ಯೆ ಅನುರಾಧಾ ಆರಾಧ್ಯಮಠ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಅತಿಥಿಗಳಾಗಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್​, ಶಾಸಕ ಅರವಿಂದ ಬೆಲ್ಲದ, ಕೆ.ಪಿ. ಸುರೇಶ, ವಿ.ಎಸ್​. ಹೆಗಡೆ ಆಗಮಿಸಲಿದ್ದಾರೆ. ಸಂಸ್ಥೆ ಅಧ್ಯಕ್ಷ ವಿಜಯ ಕುಲಕರ್ಣಿ ಅಧ್ಯಕ್ಷತೆ ವಹಿಸುವರು ಎಂದರು.
ಕೋವಿಡ್​ ಸಮಯದಲ್ಲಿ ಸಂಸ್ಥೆ ವತಿಯಿಂದ ಕಾಲೇಜಿನಲ್ಲಿ ಉಚಿತ ಶಿಕ್ಷಣ ನೀಡಲಾಗಿದ್ದು, ಇದೀಗ ಪ್ರತಿ ವರ್ಷ 5 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ನೀಡಲಾಗುತ್ತಿದೆ. ಸತತ 2 ವರ್ಷಗಳಿಂದ ಶೇ. 100ರಷ್ಟು ಫಲಿತಾಂಶ ಸಾಧಿಸುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಲಾಗಿದೆ ಎಂದರು.
ಗಿರೀಶ ಹಾದಿಮನಿ, ದುಂಡಯ್ಯ ಹಿರೇಮಠ, ಬಸವರಾಜ ಜಿ., ಮಾರುತಿ ಕದಂ, ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net