

ವಿಜಯವಾಣಿ ಸುದ್ದಿಜಾಲ ಧಾರವಾಡ
ಕರ್ನಾಟಕ ವಿಶ್ವ ವಿದ್ಯಾಲಯದ ಗಣಿತ ವಿಭಾಗ, ಪಾವಟೆ ಇನ್ಸ್ಟಿಟ್ಯೂಟ್ ಆಫ್ ಮ್ಯಾಥಮೆಟಿಕಲ್ ಸೈನ್ಸ್ ಹಾಗೂ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ ಆ. 2ರಿಂದ 4ರವರೆಗೆ ಗಣಿತ ವಿಶ್ಲೇಷಣೆ ಮತ್ತು ಅನ್ವಯಗಳ ಕುರಿತು ಅಂತರ್ರಾಷ್ಟ್ರೀಯ ಸಮ್ಮೇಳನ ಮತ್ತು ಪ್ರೊ. ಬಿ.ಬಸವನಗೌಡ ಅವರ ಬೀಳ್ಕೊಡಗೆ ಸಮಾರಂಭವನ್ನು ವಿಜ್ಞಾನ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ಅಂದು ಬೆಳಗ್ಗೆ 9 ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು ಎಂದು ಪ್ರಕಟಣೆ ತಿಳಿಸಿದೆ.