ಹಿಂದು ಸಮಾಜಕ್ಕೆ ಅಪಮಾನವಾಗುವಂತೆ ನಡೆದುಕೊಂಡ ಕಾಂಗ್ರೆಸ್ ಸರ್ಕಾರ

ex minister k.s.eshwarappa
Published on

ಶಿವಮೊಗ್ಗ: ಧರ್ಮಸ್ಥಳ ಪ್ರಕರಣದಲ್ಲಿ ಇಡೀ ಹಿಂದು ಸಮಾಜಕ್ಕೆ ಅಪಮಾನವಾಗುವಂತೆ ಕಾಂಗ್ರೆಸ್ ಸರ್ಕಾರ ನಡೆದುಕೊಂಡಿದೆ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೂರಾರು ಹೆಣಗಳನ್ನು ಹೂತು ಹಾಕಿದ್ದೇನೆಂದು ಅನಾಮಿಕ ಹೇಳಿದ್ದಾನೆ. ಹೆಣ ಹೂತು ಹಾಕಲಾಗಿದೆ ಎಂದು ಧರ್ಮಸ್ಥಳ, ಧರ್ಮದರ್ಶಿ ವೀರೇಂದ್ರ ಹೆಗ್ಗಡೆ, ಇಡೀ ಹಿಂದು ಸಮಾಜ ಹಾಗೂ ಇಡೀ ಭಕ್ತರಿಗೆ ಅಪಮಾನ ಮಾಡಲಾಗಿದೆ. ಧರ್ಮಸ್ಥಳ ಪ್ರಕರಣದಲ್ಲಿ ದುಷ್ಟ ಶಕ್ತಿ ಪ್ರಯತ್ನ ಸಂಪೂರ್ಣ ವಿಫಲವಾಗಿದೆ ಎಂದರು.

ರಾಜ್ಯ ಸರ್ಕಾರ ಯಾರ ಮಾತು ಕೇಳಿ ಎಸ್‌ಐಟಿ ರಚನೆ ಮಾಡಿದೆ ಎಂದು ಗೊತ್ತಿಲ್ಲ. ಆದರೆ ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಾರೆ. ತನಿಖೆಯಿಂದ ಇಡೀ ಸಮಾಜಕ್ಕೆ ನ್ಯಾಯ ಸಿಗಬೇಕು. ವಿರೇಂದ್ರ ಹೆಗ್ಗಡೆ ಕುಟುಂಬ ಮತ್ತು ಹಿಂದು ಸಮಾಜಕ್ಕೆ ನ್ಯಾಯ ಸಿಗಬೇಕು. ಅನಾಮಿಕನನ್ನು ತಕ್ಷಣ ಬಂಧಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು.

ಅನಾಮಿಕನನ್ನು ಪೊಲೀಸ್ ಕಸ್ಟಡಿಯಲ್ಲಿ ಇಟ್ಟುಕೊಂಡು ತನಿಖೆ ನಡೆಸಿದರೆ ಎಲ್ಲವೂ ಹೊರಬರಲಿದೆ. ಎಡಪಂಥಿಯರು ಮಾಡಿರುವ ಷಡ್ಯಂತ್ರ ಇದಾಗಿದ್ದು, ಅನಾಮಿಕನ ಹಿಂದೆ ಯಾರು ಯಾರಿದ್ದಾರೆಂದು ತನಿಖೆ ನಡೆಸಬೇಕು. ವಿದೇಶಿ ಹಣ ಇದರಲ್ಲಿ ಹೂಡಿಕೆಯಾಗಿದಿಯಾ ಎಂಬ ಅನುಮಾನ ಕಾಡುತ್ತಿದೆ. ಅನಾಮಿಕ ವ್ಯಕ್ತಿಗೆ ಮಂಪರು ಪರೀಕ್ಷೆ ನಡೆಸಿದಾಗ ಎಲ್ಲ ಸತ್ಯವೂ ಹೊರಬರಲಿದೆ ಎಂದು ಒತ್ತಾಯಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net