ಸಾಂತ್ವನ ಹೇಳಿದ ಶಾಸಕ

Anil-Chikkamadu-013
Published on

ಮೈಸೂರು: ಶಾಸಕ ಅನಿಲ್ ಚಿಕ್ಕಮಾದು ಮೈಸೂರಿನ ಮೆಡಿಕಲ್ ಕಾಲೇಜು ಶವಾಗಾರಕ್ಕೆ ಭೇಟಿ ನೀಡಿ, ಕರಿಯಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಬಳಿಕ ಮಾತನಾಡಿದ ಅವರು, ತಾಲೂಕಿನಲ್ಲಿ ಇಂತಹ ಘಟನೆ ನಡೆಯಬಾರದಿತ್ತು. ಆದರೆ ಅರಣ್ಯ ಇಲಾಖೆ ಸಿಬ್ಬಂದಿಯ ಬೇಜವಾಬ್ದಾರಿಯಿಂದ ನಡೆದಿದೆ.

ಈಗಾಗಲೇ ಈ ಪ್ರಕರಣವನ್ನು ಸಿಒಡಿ ತನಿಖೆಗೆ ವಹಿಸಲಾಗಿದೆ. ತಪ್ಪಿತಸ್ಥರು ಯಾರೇ ಆದರೂ ಕಾನೂನಿನ ಅಡಿಯಲ್ಲಿ ಕ್ರಮ ಆಗಬೇಕು. ಯಾವುದೇ ಕಾರಣಕ್ಕೂ ಮೃತ ಕುಟುಂಬಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ. ನೊಂದ ಕುಟುಂಬದ ಜತೆ ಸೇರಿ ಹೋರಾಟ ಮಾಡಲು ಸದಾ ಸಿದ್ಧವಾಗಿರುತ್ತೇನೆ. ಸರ್ಕಾರದಿಂದ ಮೃತ ಕುಟುಂಬಕ್ಕೆ ಪರಿಹಾರ ಕೊಡಿಸಲು ಸಂಬಂಧಿಸಿದ ಅಧಿಕಾರಿಗಳ ಜತೆ ಚರ್ಚೆ ನಡೆಸುತ್ತೇನೆ ಎಂದರು.

ಜೆಡಿಎಸ್ ಮುಖಂಡ ಜಯಪ್ರಕಾಶ್ ಚಿಕ್ಕಣ್ಣ ಶವಾಗಾರಕ್ಕೆ ಭೇಟಿ ನೀಡಿ, ಕರಿಯಪ್ಪ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net