

ಹನೂರು: ಡಾ.ಬಿ.ಆರ್.ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಸದೃಢ ರಾಷ್ಟ್ರ ನಿರ್ಮಾಣಕ್ಕೆ ಸಹಕಾರಿಯಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ದಕ್ಷತೆಯಿಂದ ಕಾರ್ಯನಿರ್ವಹಿಸಬೇಕು ಎಂದು ತಹಸೀಲ್ದಾರ್ ವೈ.ಕೆ ಗುರುಪ್ರಸಾದ್ ಹೇಳಿದರು.
ಪಟ್ಟಣದ ತಹಸೀಲ್ದಾರ್ ಕಚೇರಿಯ ಆವರಣದಲ್ಲಿ ಭಾನುವಾರ ಆಯೋಜಿಸಿದ್ದ 76ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ದೇಶವು ವಿವಿಧ ಜಾತಿ, ಭಾಷೆ ಹಾಗೂ ಧರ್ಮಗಳನ್ನು ಒಳಗೊಂಡಿದ್ದು, ಏಕತೆಯಿಂದ ಕೂಡಿದೆ. ಜತೆಗೆ ದೇಶವು ಆರ್ಥಿಕ, ಸಾಮಾಜಿಕ, ರಾಜಕೀಯ ಹಾಗೂ ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಬೇಕಾದರೆ ಸಂವಿಧಾನದಲ್ಲಿ ಅಡಕವಾಗಿರುವ ಅಂಶಗಳೇ ಕಾರಣ. ಆದ್ದರಿಂದ ಪ್ರತಿಯೊಬ್ಬರೂ ಸಂವಿಧಾನವನ್ನು ಗೌರವಿಸುವುದರ ಮೂಲಕ ಅದರ ಚೌಕಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು. ಇದರಿಂದ ದೇಶ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.
ಉಪ ತಹಸೀಲ್ದಾರ್ ಸುರೇಖಾ, ಶಿರಸ್ತೇದಾರ್ ಮಹದೇವನಾಯ್ಕ, ಆರ್‌ಐ ಶೇಷಣ್ಣ, ಗ್ರಾಮ ಆಡಳಿತ ಅಧಿಕಾರಿ ಹೇಮಾ, ವಾಸುದೇವ, ಲೋಕೇಶ್, ಪುನೀತ್ ಇ್ನತರರು ಇದ್ದರು.