ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಪಾರ

manvi laber
ಮಾನ್ವಿಯಲ್ಲಿ ಪೌರಕಾರ್ಮಿಕರ ಕ್ರೀಡಾಕೂಟಕ್ಕೆ ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಚಾಲನೆ ನೀಡಿದರು. ಪುರಸಭೆ ಸದಸ್ಯರಾದ ರಾಜಾ ಮಹೇಂದ್ರ ನಾಯಕ, ಸುಖಮುನಿ, ವೆಂಕಟೇಶ ನಾಯಕ, ಬಾಷಾಸಾಬ್ ಇತರರಿದ್ದರು.
Published on

ಮಾನ್ವಿ: ಪಟ್ಟಣದ ಸ್ವಚ್ಛತಾ ಕಾರ್ಯದಲ್ಲಿ ತೊಡಗುವ ಕಾರ್ಮಿಕರಿಗೆ ವಿವಿಧ ಕ್ರೀಡಾಕೂಟಗಳನ್ನು ಆಯೋಜಿಸುವುದರಿಂದ ದೈಹಿಕ, ಮಾನಸಿಕ ಒತ್ತಡ ಕಡಿಮೆಯಾಗಿ ನೆಮ್ಮದಿ ಸಿಗಲಿದೆ ಎಂದು ಪುರಸಭೆ ಮುಖ್ಯಾಧಿಕಾರಿ ಪರಶುರಾಮ ದೇವಮಾನೆ ಹೇಳಿದರು.

ಪಟ್ಟಣದ ಬಾಷುಮಿಯ ಸರ್ಕಾರಿ ಪದವಿ ಕಾಲೇಜು ಕ್ರೀಡಾಂಗಣದಲ್ಲಿ ಸೋಮವಾರ ಪೌರಕಾರ್ಮಿಕರ ದಿನಾಚರಣೆ ಅಂಗವಾಗಿ ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಘಟಕ ಏರ್ಪಡಿಸಿದ್ದ ವಿವಿಧ ಕ್ರೀಡೆಗಳಿಗೆ ಚಾಲನೆ ನೀಡಿ ಮಾತನಾಡಿದರು.

ಪ್ರತಿದಿನ ನಗರವನ್ನು ಸ್ವಚ್ಛ ಮತ್ತು ಸುಂದರವಾಗಿಡುವಲ್ಲಿ ಪುರಸಭೆ ಪೌರಕಾರ್ಮಿಕರ ಕೊಡುಗೆ ಅಪಾರವಾಗಿದೆ ಎಂದರು. ಪುರಸಭೆ ಸದಸ್ಯರಾದ ರಾಜಾ ಮಹೇಂದ್ರ ನಾಯಕ, ಸುಖಮುನಿ, ವೆಂಕಟೇಶ ನಾಯಕ, ಬಾಷಾಸಾಬ್, ಪೌರ ಸೇವಾ ನೌಕರರ ಸೇವಾ ಸಂಘದ ತಾಲೂಕು ಅಧ್ಯಕ್ಷ ಹನುಮಂತಪ್ಪ, ಗೌರವಾಧ್ಯಕ್ಷ ಮಹೇಶ್‌ಕುಮಾರ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net