ಶಿಕ್ಷಣ ಕ್ಷೇತ್ರಕ್ಕೆ ಖಾಸಗಿ ಸಂಸ್ಥೆಗಳ ಕೊಡುಗೆ ಅಪಾರ

5hgr1
Published on

ಹಲಗೂರು: ತಾಲೂಕಿನ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಕಟ್ಟಡ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಖಾಸಗಿ ಸಂಸ್ಥೆಗಳು ನೀಡುತ್ತಿರುವ ಕೊಡುಗೆ ಅಪಾರವಾದದು ಎಂದು ಶಾಸಕ ಪಿ.ಎಂ.ನರೇಂದ್ರಸ್ವಾಮಿ ತಿಳಿಸಿದರು.

ಸಮೀಪದ ಗುಂಡಾಪುರ ಗ್ರಾಮದಲ್ಲಿ ಬಾಷ್ ಇಂಡಿಯಾ ಕಂಪನಿಯ ಸಿಎಸ್‌ಆರ್ ಅನುದಾನದಡಿಯಲ್ಲಿ 30 ಲಕ್ಷ ರೂ. ವೆಚ್ಚದಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳ ನವೀಕರಣ ಮತ್ತು ನೂತನ ರಂಗಮಂದಿರ ನಿರ್ಮಾಣ ಕಾಮಗಾರಿಗೆ ಶುಕ್ರವಾರ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.

ಬಾಷ್ ಕಂಪನಿಯವರು ತಮ್ಮ ಸಿಎಸ್‌ಆರ್ ಅನುದಾನದಲ್ಲಿ ನಮ್ಮ ತಾಲೂಕಿನ ಎರಡು ಶಾಲೆಗಳ ಹೊಸದಾಗಿ ನಿರ್ಮಾಣ ಮಾಡುವುದಕ್ಕೆ ಜವಾಬ್ದಾರಿಯನ್ನು ತೆಗೆದುಕೊಂಡು ಮುಂದೆ ಬಂದಿದ್ದಾರೆ. ಅದಕ್ಕಾಗಿ ನಾನು ನಮ್ಮ ಕ್ಷೇತ್ರದ ಜನರ ಪರವಾಗಿ ಅವರಿಗೆ ಅಭಿನಂದನೆ ಸಲ್ಲಿಸುವೆ ಎಂದರು.

ಈ ಸಂದರ್ಭದಲ್ಲಿ ಬಾಷ್ ಇಂಡಿಯಾ ಕಂಪನಿಯ ಕಾರ್ಯಕ್ರಮ ಮುಖ್ಯಸ್ಥರಾದ ಎಂ.ಪಿ.ಕಾಮತ್, ಡಿ.ಜಿ.ಎಂ. ವಿಜಯ್ ಕುಮಾರ್ ಅವರನ್ನು ಶಾಲೆಯ ವತಿಯಿಂದ ಅಭಿನಂದಿಸಲಾಯಿತು. ಮಾಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಗುಂಡಾಪುರದ ರಾಜು ವಿದ್ಯಾರ್ಥಿಗಳಿಗೆ ನೋಟ್ ಬುಕ್ ವಿತರಣೆ ಮಾಡಿದರು.

ಎಚ್.ಬಸಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜ್ಯೋತಿ, ಉಪಾಧ್ಯಕ್ಷ ಶಿವರಾಜು, ಸದಸ್ಯರಾದ ಬಿ.ಡಿ.ರಾಜೇಂದ್ರ, ಮಂಜುನಾಥ್, ಮುತ್ತಮ್ಮ, ಕ್ಷೇತ್ರ ಶಿಕ್ಷಣ ಅಧಿಕಾರಿ ವಿ.ಈ.ಉಮಾ, ಶ್ರೀನಿವಾಸ, ಟಿ.ಎಂ.ರವಿಕುಮಾರ್ ಮತ್ತು ಪಿಡಿಒ ಮಂಗಳಾ, ಮುಖ್ಯ ಶಿಕ್ಷಕ ತಿಮ್ಮಯ್ಯ, ಶಿಕ್ಷಕ ಜಿ.ಎಸ್.ಕೃಷ್ಣ, ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್, ಮುಖಂಡರಾದ ನಾಗಸಿದ್ದಯ್ಯ, ಎಂ.ಶಿವಕುಮಾರ್, ಸಿದ್ದಪ್ಪಾಜಿ, ಮೋಹನ್ ಕುಮಾರ್, ಅಮರ್, ಭರತ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net