ದೇಶಕ್ಕೆ ಸ್ವಾಮಿ ವಿವೇಕಾನಂದ, ಸುಭಾಷ್‌ಚಂದ್ರ ಬೋಸ್ ಕೊಡುಗೆ ಅನನ್ಯ

24M.D.R.9
Published on

ಮದ್ದೂರು: ಪಟ್ಟಣದ ಗುರುಭವನದಲ್ಲಿ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ವತಿಯಿಂದ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೈಮಾಸಿಕ ಸಭೆ ಮತ್ತು ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್‌ಚಂದ್ರ ಬೋಸ್ ಅವರ ಜನ್ಮದಿನವನ್ನು ಮಂಗಳವಾರ ಆಚರಿಸಲಾಯಿತು.


ಬಿಇಒ ಸಿ.ಎಚ್.ಕಾಳೀರಯ್ಯ ಮಾತನಾಡಿ, ಸ್ವಾಮಿ ವಿವೇಕಾನಂದ ಹಾಗೂ ಸುಭಾಷ್‌ಚಂದ್ರ ಬೋಸ್ ಅವರು ದೇಶಕ್ಕೆ ತಮ್ಮದೆಯಾದ ಅನನ್ಯ ಕೊಡುಗೆ ನೀಡಿದ್ದಾರೆ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.


ಟಿಪಿಒ ಶಾಂತರಾಜು, ಸಂಘದ ಅಧ್ಯಕ್ಷ ಬೈರೇಗೌಡ, ರಾಜ್ಯ ಉಪಾಧ್ಯಕ್ಷ ಕುಮಾರ್, ರಾಜ್ಯ ಸಂಘಟನಾ ಕಾರ್ಯದರ್ಶಿ ಶಿವಲಿಂಗಯ್ಯ, ರಾಜ್ಯ ಉಪಾಧ್ಯಕ್ಷೆ ನಾಗರತ್ನಾ, ಸೇವಾದಳದ ನಿವೃತ್ತ ದಳಪತಿ ಸ್ವಾಮಿ, ಪ್ರಧಾನ ಕಾರ್ಯದರ್ಶಿ ಮಧುಸೂದನ್, ಖಜಾಂಚಿ ಸುಧಾ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಪದಾಧಿಕಾರಿಗಳಾದ ಮಾದೇಶ್, ಪುಟ್ಟರಾಜು, ಶಿವಕುಮಾರಿ, ಮಹಾದೇವ, ಸುಬ್ರಮಣ್ಯ, ಬಸವರಾಜಪ್ಪ, ಪ್ರೇಮ್‌ಕುಮಾರ್, ರಾಜಮ್ಮ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net