ಸಮಾಜದ ಉನ್ನತಿಯಲ್ಲಿ ಶಿಕ್ಷಕರ ಕೊಡುಗೆ ಅಪಾರ, ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ ಅಭಿಮತ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ

05 Nela ph 01 Teachers Abhinandane (1)
Published on

ನೆಲಮಂಗಲ: ಸಮಾಜದ ಉನ್ನತಿಯಲ್ಲಿ ಶಿಕ್ಷಕ ಸಮುದಾಯದ ಕೊಡುಗೆ ಅಪಾರ ಎಂದು ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ ಹೇಳಿದ್ದಾರೆ.

ನಗರದ ಎಸ್‌ಎಲ್‌ಆರ್ ಸಮುದಾಯ ಭವನದಲ್ಲಿ ತಾಲೂಕು ಆಡಳಿತ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಶನಿವಾರ ಆಯೋಜಿಸಿದ್ದ ತಾಲೂಕುಮಟ್ಟದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಪ್ರತಿವರ್ಷ ಸಾವಿರಾರು ಶಿಕ್ಷಕರು ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ಶಿಕ್ಷಕರ ದಿನ ಆಚರಿಸಲಾಗುತ್ತಿತ್ತು. ಆದರೆ, ದೇಶದಾದ್ಯಂತ ಕೋವಿಡ್ ಪಿಡುಗು ಹಬ್ಬಿರುವ ಕಾರಣ ಸರ್ಕಾರದ ಆದೇಶದಂತೆ ಈ ಬಾರಿ ಸರಳವಾಗಿ ಆಚರಿಸಲಾಗುತ್ತಿದೆ ಎಂದರು.

ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ತಾಲೂಕಿಗೆ ಉತ್ತಮ ಲಿತಾಂಶ ದೊರೆತಿರುವುದು ಸಂತಸದ ಸಂಗತಿ ಎಂದು ಹೇಳಿದರು.

ಪ್ರಣಬ್ ಮುಖರ್ಜಿಗೆ ಶ್ರದ್ಧಾಂಜಲಿ: ಶಿಕ್ಷಕರ ದಿನದ ಪ್ರಯುಕ್ತ ಸರ್ವಪಲ್ಲಿ ಡಾ. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಶಾಸಕ ಡಾ. ಕೆ. ಶ್ರೀನಿವಾಸಮೂರ್ತಿ ಮತ್ತು ಇತರ ಗಣ್ಯ ಪುಷ್ಪನಮನ ಸಲ್ಲಿಸಿದರು. ಜತೆಗೆ ಎರಡು ನಿಮಿಷ ಮೌನಾಚರಿಸುವ ಮೂಲಕ ಆ.31ರಂದು ನಿಧನರಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ಡಾ. ಬಿ.ರಂಗನಾಥ್, ಇಒ ಲಕ್ಷ್ಮೀನಾರಾಯಣ್, ಶಿರಸ್ತೇದಾರ್ ಶ್ರೀನಿವಾಸ್ ಮೂರ್ತಿ, ರಾಜಸ್ವ ನಿರೀಕ್ಷಕ ರವಿಕುಮಾರ್, ಕ್ಷೇತ್ರ ಸಮಸ್ವಯಾಧಿಕಾರಿ ನರಸಿಂಹಯ್ಯ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಶಿವಕುಮಾರ್, ನಗರಸಭೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಬಿ. ನಾಗರಾಜು, ಪ್ರೌಢಶಾಲಾ ಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ವಿ. ರಾಜಣ್ಣ, ಶಾಲಾಮುಖ್ಯ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಿವಾಸ್, ಮುಖ್ಯಶಿಕ್ಷಕಿ ಗೌಹಾರ್ ಜಾನ್ ಮತ್ತಿತರರು ಇದ್ದರು.

ಶಿಕ್ಷಕರು ದೇಶದ ಆಡಳಿತ ಚುಕ್ಕಾಣಿ ಹಿಡಿಯಬಲ್ಲರು ಎಂಬುದನ್ನು ಡಾ. ಸರ್ವಪಲ್ಲಿ ರಾಧಾಕೃಷ್ಣನ್ ತೋರಿಸಿಕೊಟ್ಟಿದ್ದಾರೆ. ದೇಶದ ಅಭಿವೃದ್ಧಿಗೆ ಅಡಿಪಾಯ ಹಾಕಿದ ಮಹನೀಯರನ್ನು ಸ್ಮರಿಸುವ ಜತೆಗೆ ಅವರ ಆದರ್ಶ ಪಾಲಿಸಬೇಕು. ಡಾ. ಶ್ರೀನಿವಾಸಮೂರ್ತಿ ಶಾಸಕ

20 ನಿವೃತ್ತ ಶಿಕ್ಷಕರಿಗೆ ಸನ್ಮಾನ: ತಾಲೂಕಿನ ವಿವಿಧ ಶಾಲೆಗಳಲ್ಲಿ ಮುಖ್ಯಶಿಕ್ಷಕ ಮತ್ತು ಸಹಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತರಾದ 20 ಮಂದಿಯನ್ನು ಸನ್ಮಾನಿಸಲಾಯಿತು. ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಉತ್ತಮ ಅಂಕ ಪಡೆದ 15 ಮಂದಿ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net