ಶಾಲೆಗಳ ಬೆಳವಣಿಗೆಗೆ ನೀಡುವ ಕೊಡುಗೆ ಶ್ರೇಷ್ಠ

Published on

ವಿಜಯವಾಣಿ ಸುದ್ದಿಜಾಲ ಆರ್ಡಿ

ಭವಿಷ್ಯ ರೂಪಿಸಿದ ಶಾಲೆಯ ಬೆಳವಣಿಗೆಗೆ ನೀಡುವ ಕೊಡುಗೆಗಳು ಶ್ರೇಷ್ಠ ಎಂದು ಆರ್ಡಿ ಬೆಳ್ವೆ ಗೋಳಿಯಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಸುರ‌್ಗೋಳಿ ಹೇಳಿದರು.

ಕೊಂಜಾಡಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ವಾರ್ಷಿಕೋತ್ಸವ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ಬೆಳ್ವೆ ಗ್ರಾಪಂ ಅಧ್ಯಕ್ಷೆ ರಾಧಾ ಕಾರ್ಯಕ್ರಮ ಉದ್ಘಾಟಿಸಿದರು. ಹಿಲಿಯಾಣ ಬ್ರಹ್ಮಬೈದರ್ಕಳ ಗರೋಡಿ ಅಧ್ಯಕ್ಷ ವೈ.ಕರುಣಾಕರ ಶೆಟ್ಟಿ, ಲಯನ್ಸ್ ಕ್ಲಬ್ ಉಪಾಧ್ಯಕ್ಷ ಬಾಬು ಶೆಟ್ಟಿ, ಕಾರ್ಯದರ್ಶಿ ಅಣ್ಣಯ್ಯ ಶೆಟ್ಟಿ, ವಲಯ ಕಾರ್ಯದರ್ಶಿ ವೈ.ಪಟ್ಟಾಭಿರಾಮ್ ಭಟ್, ಪತ್ರಕರ್ತ ಕೆ.ಸಂಜೀವ ಆರ್ಡಿ, ದಾನಿ ಶ್ರೀನಿವಾಸ ಆಚಾರ್ಯ, ಲಲಿತಾ ಪದ್ಮನಾಭ ಆಚಾರ್ಯ, ಹಳೇ ವಿದ್ಯಾರ್ಥಿ ಸಂಘ ಅಧ್ಯಕ್ಷ ಪ್ರಸಾದ್ ತೊನ್ನಾಸೆ, ಎಸ್‌ಡಿಎಂಸಿ ಮಾಜಿ ಅಧ್ಯಕ್ಷ ಅಚ್ಯುತ್ ಶೆಟ್ಟಿ, ಹಾಲಿ ಅಧ್ಯಕ್ಷ ಗಿರೀಶ್ ನಾಯ್ಕ, ಬೆಳ್ವೆ ಗ್ರಾಪಂ ಸದಸ್ಯ ನಾರಾಯಣ ನಾಯ್ಕ, ಸ್ಥಳೀಯರಾದ ನಾರಾಯಣ ನಾಯ್ಕ, ಮುಖ್ಯ ಶಿಕ್ಷಕ ನಾರಾಯಣ ನಾಯ್ಕ ಮೊದಲಾದವರು ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ನಾರಾಯಣ ನಾಯ್ಕ ಗೋಳಿಯಂಗಡಿ ಸ್ವಾಗತಿಸಿದರು. ಅಂಗನವಾಡಿ ಕಾರ್ಯಕರ್ತೆ ರತ್ನಾ ಬಹುಮಾನ ಪಟ್ಟಿ ವಾಚಿಸಿದರು. ಸಹಶಿಕ್ಷಕಿ ಶಶಿಕಲಾ ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net