

ರಾಯಚೂರು ನಗರದಲ್ಲಿ ರಾಜಕಾಲುವೆ ಸ್ವಚ್ಚಗೊಳಿಸುವ ಪೌರ ಕಾರ್ಮಿಕರಿಗೆ ಸುರಕ್ಷತಾ ಕಿಟ್ ಸೇರಿದಂತೆ ವಿವಿಧ ಉಪಕರಣಗಳನ್ನು ಪಾಲಿಕೆ ಆಯುಕ್ತ ಜುಬಿನ್ ಮೊಹಪಾತ್ರ ವಿತರಣೆ ಮಾಡಿದರು.
ನಂತರ ಮಾತನಾಡಿ, ಚಳಿ, ಮಳೆ ಬಿಸಿಲನ್ನು ಲೆಕ್ಕಿಸದೆ ನಗರದ ಸ್ವಚ್ಚತೆಗಾಗಿ ದೈನಂದಿನವಾಗಿ ಕಾರ್ಯನಿರ್ವಹಿಸುವ ಪೌರ ಕಾರ್ಮಿಕರು ಆರೋಗ್ಯದ ಕಡೆ ಗಮನ ಹರಿಸಬೇಕು. ಸ್ವಚ್ಚತೆಗೆ ಹೆಚ್ಚಿನ ಒತ್ತು ನೀಡಬೇಕು, ಯಾವುದೇ ಸಮಸ್ಯೆ ಇದ್ದರೆ ನೇರವಾಗಿ ನನ್ನ ಜತೆತೆ ಮಾತನಾಡುವಂತೆ ತಿಳಿಸಿದರು.
ಈ ಸಂದರ್ಭದಲ್ಲಿ ಪಾಲಿಕೆ ಅಧ್ಯಕ್ಷ ನರಸಮ್ಮ ಮಾಡಗಿರಿ, ಆರ್‌ಡಿಎ ಸದಸ್ಯ ನರಸಿಂಹಲು ಮಾಡಗಿರಿ ಸೇರಿದಂತೆ ಮಹಾನಗರ ಪಾಲಿಕೆ ಅಧಿಕಾರಿಗಳು ಹಾಗೂ ಪೌರಕಾರ್ಮಿಕರು ಇದ್ದರು.