

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಕಳೆದ ಹನ್ನೊಂದು ವರ್ಷದಲ್ಲಿ ಮಹಿಳೆ, ಯುವಕರು, ರೈತರ ಸೇರಿದಂತೆ ಎಲ್ಲ ವರ್ಗದ ಜನರಿಗೆ ನ್ಯಾಯ ನೀಡುವ ಕೆಲಸ ಮಾಡಿದ್ದಾರೆ. ವಿಶ್ವದಲ್ಲಿ ಬಲಾಢ್ಯ ದೇಶವಾಗಿ ಭಾರತ ಗುರುತಿಸಿಕೊಂಡಿದೆ ಎಂದು ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ ಹೇಳಿದರು.\
ನಗರದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 75 ವರ್ಷದಲ್ಲಿ ಕಾಣದ ಅಭಿವೃದ್ಧಿ ಕೆಲಸ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಮಾಡಿದೆ. ಆಪರೇಷನ್ ಸಿಂಧೂರ ವಿಜಯದ ಮೂಲಕ ರಕ್ಷಣಾ ಇಲಾಖೆಗೆ ಬಲ ಬಂದಿದೆ. ಜಲ ಜೀವನ ಮಿಷನ್, ರಾಮ ಮಂದಿರ ನಿರ್ಮಾಣ, ಆರ್ಟಿಕಲ್ 370 ರದ್ದು ಸೇರಿದಂತೆ ಮಹತ್ತರ ನಿರ್ಧಾರ ಕೈಗೊಂಡು ದೇಶವನ್ನು ಅಭಿವೃದ್ಧಿ ಪಥದತ್ತ ತೆಗೆದುಕೊಂಡು ಹೋಗಿದ್ದಾರೆ. ಯುಪಿಎ 1 ಮತ್ತು 2 ನೇ ಅವಧಿಯಲ್ಲಿ ಕೇವಲ 2 ಕೋಟಿ ಉದ್ಯೋಗ ಸೃಷ್ಟಿಯಾಗಿತ್ತು. ಆದರೆ, ನರೇಂದ್ರ ಮೋದಿ ಸರ್ಕಾರ 11 ವರ್ಷದ ಅವಧಿಯಲ್ಲಿ 17 ಕೋಟಿ ಉದ್ಯೋ ಸೃಷ್ಟಿಯಾಗಿವೆ ಎಂದರು. ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಸಂಜಯ ಪಾಟೀಲ, ಅನಿಲ ಬೆನಕೆ, ಸುಭಾಷ ಪಾಟೀಲ, ಗೀತಾ ಸುತಾರ, ಹನುಮಂತ ಕೊಂಗಾಲಿ ಇತರರಿದ್ದರು.