ದೇಶದ ಸಂಸ್ಕೃತಿ ಪ್ರಪಂಚಕ್ಕೆ ಮಾದರಿ

ನಾಗಮಂಗಲ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.
ನಾಗಮಂಗಲ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಸ್ವಾತಂತ್ರೊೃೀತ್ಸವ ಸಮಾರಂಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾಧಕರನ್ನು ತಾಲೂಕು ಆಡಳಿತ ವತಿಯಿಂದ ಸನ್ಮಾನಿಸಲಾಯಿತು.
Published on

ನಾಗಮಂಗಲ: ಅಸಂಖ್ಯಾತ ಹೋರಾಟಗಾರರು ದೇಶಕ್ಕೆ ಸ್ವಾತಂತ್ರ್ಯ ತರಲು ಪ್ರಾಣಾರ್ಪಣೆ ಮಾಡಿದವರನ್ನು ನೆನೆಯುವ ದಿನವೇ ಸ್ವಾತಂತ್ರ್ಯ ದಿನಾಚರಣೆ ಎಂದು ಉಪನ್ಯಾಸಕ ಗಂಗಾಧರ್ ಹೇಳಿದರು.

ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ಸ್ವಾತಂತ್ರೃ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ಅಹಿಂಸಾತ್ಮಕ ಹೋರಾಟ ಮತ್ತು ಅನೇಕ ಮಹನೀಯರ ತ್ಯಾಗಬಲಿದಾನಗಳಿಂದ ಸಿಕ್ಕಿರುವ ಸ್ವಾತಂತ್ರೃದಿಂದ ನಮ್ಮ ದೇಶದ ಸಂಸ್ಕೃತಿ ಹಾಗೂ ಪರಂಪರೆ ಇಡೀ ಪ್ರಪಂಚಕ್ಕೆ ಮಾದರಿಯಾಗಿದೆ ಎಂದರು.

ಧ್ವಜಾರೋಹಣ ನೆರವೇರಿಸಿದ ಪ್ರಭಾರ ತಹಸೀಲ್ದಾರ್ ಜಿ.ಎಂ.ಸೋಮಶೇಖರ್ ಮಾತನಾಡಿ, ನಮ್ಮ ದೇಶ ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವ ಹೊಂದಿರುವ ರಾಷ್ಟ್ರವಾಗಿದೆ. ದೇಶಕ್ಕೆ ಅನ್ನ ನೀಡುವ ರೈತ ಮತ್ತು ದುಡಿಯುವ ಶ್ರಮಿಕನ ಬದುಕು ಹಸನಾಗಬೇಕು. ಪ್ರತಿಯೊಬ್ಬರೂ ನೆಮ್ಮದಿಯ ಬದುಕು ಸಾಗಿಸುವ ಜತೆಗೆ ದೇಶವನ್ನು ಪ್ರಗತಿಯ ಪಥದತ್ತ ಕೊಂಡೊಯ್ಯಬೇಕು ಎಂದರು.ಬಳಿಕ 2023ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅತಿ

ಹೆಚ್ಚು ಅಂಕ ಪಡೆದ ಆರ್.ಸಹನಾ, ಎಂ.ಜೆ.ವಿದ್ಯಾ, ನಂದಿತಾ, ಡಿ.ಎಸ್.ದಕ್ಷತಾ ಅವರಿಗೆ ಶಿಕ್ಷಣ ಇಲಾಖೆ ವತಿಯಿಂದ ಉಚಿತವಾಗಿ ಲ್ಯಾಪ್‌ಟಾಪ್ ವಿತರಿಸಲಾಯಿತು. ಪ್ರಸಕ್ತ ಸಾಲಿನಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ನಂತರ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕೃಷಿಕ ರಾಮಕೃಷ್ಣೇಗೌಡ, ಸಮಾಜ ಸೇವಕಿ ಶೀಲಾ, ಪತ್ರಕರ್ತ ಯು.ವಿ.ಉಲ್ಲಾಸ್, ನೈರ್ಮಲ್ಯ ಕ್ಷೇತ್ರದ ಮುರುಗನ್, ತೋಟಗಾರಿಕೆ ಕ್ಷೇತ್ರದ ರಾಮು, ಆರೋಗ್ಯ ಕ್ಷೇತ್ರದ ಸಾಧಕಿ ಜೀನತ್ ಉನ್ನೀಸಾ ಅವರನ್ನು ತಾಲೂಕು ಆಡಳಿತದ ವತಿಯಿಂದ ಸನ್ಮಾನಿಸಲಾಯಿತು.

ವಿವಿಧ ಶಾಲೆ, ಕಾಲೇಜುಗಳ ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು. ಕಾರ್ಯಕ್ರಮಕ್ಕೂ ಹಲವು ಶಾಲಾ ವಿದ್ಯಾರ್ಥಿಗಳ ತಂಡ ಶಿಸ್ತಿನ ಪಥಸಂಚಲನ ನಡೆಸಿ ಧ್ವಜವಂದನೆ ಸಲ್ಲಿಸಿದರು. ಡಿವೈಎಸ್‌ಪಿ ಎ.ಆರ್.ಸುಮಿತ್, ಸಿಪಿಐ ನಿರಂಜನ್, ಬಿಇಒ ಕೆ.ಯೋಗೇಶ್, ತಾಪಂ ಇಒ ಬಿ.ಎಸ್.ಸತೀಶ್, ಪುರಸಭೆ ಮುಖ್ಯಾಧಿಕಾರಿ ಸಿ.ಶ್ರೀನಿವಾಸ್, ಅರಣ್ಯಾಧಿಕಾರಿ ಮಂಜುನಾಥ್, ತಾಲೂಕು ಕಸಾಪ ಅಧ್ಯಕ್ಷ ಚಂದ್ರಶೇಖರ್, ಸಿಡಿಪಿಒ ಕೃಷ್ಣಮೂರ್ತಿ, ಟಿಎಚ್‌ಒ ರಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net