ಹಾಲಶ್ರೀ ಸಲ್ಲಿಸಿದ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್

Published on

ಬೆಂಗಳೂರು: ಉದ್ಯಮಿ ಗೋವಿಂದಬಾಬು ಪೂಜಾರಿಗೆ ಎಂಎಲ್‌ಎ ಟಿಕೇಟ್ ಕೊಡಿಸುವುದಾಗಿ ನಂಬಿಸಿ 5 ಕೋಟಿ ರೂ. ಪಡೆದು ವಂಚಿಸಿದ ಪ್ರಕರಣ ಮೂರನೇ ಆರೋಪಿ ಅಭಿನವ ಹಾಲಶ್ರೀ ಸಲ್ಲಿಸಿದ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.
ವಂಚನೆ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ಹಾಲಶ್ರೀ ಅವರು, ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಗರದ ಸಿಸಿಎಚ್ ೫೭ನೇ ನ್ಯಾಯಾಲಯ ವಜಾಗೊಳಿಸಿದೆ.
ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶ ಕಾಯ್ದಿರಿಸಿತ್ತು. ಸೋಮವಾರ ಅರ್ಜಿ ವಜಾಗೊಳಿಸಿ ಆದೇಶಿಸಿದೆ. ಮತ್ತೊಂದೆಡೆ ಜಾಮೀನು ನೀಡದಂತೆ ಸಿಸಿಬಿ ಆಕ್ಷೇಪಣೆ ಸಲ್ಲಿಸಿತ್ತು. ವಂಚನೆ ಪ್ರಕರಣದಲ್ಲಿ ಹಾಲಶ್ರೀ ಮೂರನೇ ಆರೋಪಿಯಾಗಿದ್ದಾರೆ.
ಚೈತ್ರಾ ಕುಂದಾಪುರ ಮತ್ತು ಅವರ ಸಹಚರರಿಂದ ವಂಚನೆಯಾಗಿದೆ ಎಂದು ಆರೋಪಿಸಿ ಉದ್ಯಮಿ ಗೋವಿಂದ್ ಬಾಬು ಪೂಜಾರಿ ಅವರು ಪ್ರಕರಣ ದಾಖಲಿಸಿದ ನಂತರ ಬಿಜೆಪಿ ಶಾಸಕ ಟಿಕೆಟ್ ಹಗರಣ ಬೆಳಕಿಗೆ ಬಂದಿತ್ತು. ಉಡುಪಿ ಜಿಲ್ಲೆಯ ಬೈಂದೂರಿನಿಂದ ಬಿಜೆಪಿ ಟಿಕೆಟ್ ನೀಡುವ ಭರವಸೆ ನೀಡಿದ ನಂತರ ಚೈತ್ರಾ, ಅಭಿನವ ಹಾಲಶ್ರೀ ಮತ್ತು ಇತರರಿಗೆ ಹಣ ನೀಡಿರುವುದ್ದಾಗಿ ಪೂಜಾರಿ ದೂರು ನೀಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net