ಸಾಂಸ್ಕೃತಿಕ ಕಾರ್ಯಕ್ರಮ ಸರಳತೆಗೆ ಪೂರಕ

ಸಿರಗುಪ್ಪ ಯಲ್ಲಮ್ಮದೇವಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮದಲ್ಲಿ ಸೂರ್ಯ ಕಲಾ ಟ್ರಸ್ಟ್ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಿತು.
ಸಿರಗುಪ್ಪ ಯಲ್ಲಮ್ಮದೇವಿ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮದಲ್ಲಿ ಸೂರ್ಯ ಕಲಾ ಟ್ರಸ್ಟ್ ಕಲಾವಿದರಿಂದ ನೃತ್ಯ ಪ್ರದರ್ಶನ ನಡೆಯಿತು.
Published on

ಸಿರಗುಪ್ಪ: ಶಿಕ್ಷಣದ ಜತೆ ಸರಳತೆ, ಸಂಸ್ಕೃತಿ, ಸಂಸ್ಕಾರದ ಅರಿವು ಮೂಡಿಸುವಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ನಾಗರಾಜ ಹೇಳಿದರು.

ಪಟ್ಟಣದ ಯಲ್ಲಮ್ಮದೇವಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಶನಿವಾರ ಹಮ್ಮಿಕೊಂಡಿದ್ದ ಚಿಗುರು ಕಾರ್ಯಕ್ರಮದಲ್ಲಿ ಮಾತನಾಡಿದರು. ಮಕ್ಕಳ ಪ್ರತಿಭೆ ಅನಾವರಣಕ್ಕೆ ಚಿಗುರು ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಎಂದರು.

ಸಾಹಿತಿ ಕುರುವಳ್ಳಿ ತಿಮ್ಮಯ್ಯ ಮಾತನಾಡಿ, ಕಲೆಯನ್ನು ಗುರುತಿಸಿದರೆ ಮಾತ್ರ ಕಲಾವಿದರು ಬೆಳೆಯಲು ಸಾಧ್ಯ. ವಿದ್ಯಾರ್ಥಿಗಳು ಕಂಪ್ಯೂಟರ್, ಮೊಬೈಲ್ ಬಿಟ್ಟು ಕಲೆ ಹಾಗೂ ಸಂಸ್ಕೃತಿ ಉಳಿಸುವತ್ತ ಗಮನಹರಿಸಬೇಕು ಎಂದರು. ನಗರಸಭೆ ಅಧ್ಯಕ್ಷೆ ಬಿ.ರೇಣುಕಮ್ಮ ವೆಂಕಟೇಶ, ನೃತ್ಯಪಟು ಅಭಿಷೇಕ, ಸಾಹಿತಿ ಬಿ.ಹರೀಶ, ಯಲ್ಲಮ್ಮದೇವಿ ಸಂಸ್ಥೆ ಅಧ್ಯಕ್ಷ ವೈ.ಡಿ.ವೆಂಕಟೇಶ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net