

ಸುಂಟಿಕೊಪ್ಮ: ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಸ್ಥಾನ ಸಮಿತಿ ವತಿಯಿಂದ ಭಾನುವಾರ ರಾತ್ರಿ ಮುತ್ತಪ್ಪ ದೇವರ ಪುತ್ತರಿ ವೆಳ್ಳಾಟಂ ಶ್ರದ್ಧಾಭಕ್ತಿಯಿಂದ ನಡೆಯಿತು.
ಸಂಜೆ ಮುತ್ತಪ್ಪ ದೇವರ ಮಲೆ ಇಳಿಸುವಿಕೆ ನಡೆಯಿತು. ನಂತರ ರಾತ್ರಿ 10 ಗಂಟೆವರೆಗೂ ಮುತ್ತಪ್ಪ ವೆಳ್ಳಾಟಂ ನಡೆಯಿತು. ಹೋಬಳಿ ವ್ಯಾಪ್ತಿಯ ಕೆದಕಲ್, ಏಳನೇ ಹೊಸಕೋಟೆ, ಕೊಡಗರಹಳ್ಳಿ, ಅತ್ತೂರು, ಬಾಳೆಕಾಡಿನಿಂದ ಆಗಮಿಸಿದ್ದ ನೂರಾರು ಸಂಖ್ಯೆಯ ಭಕ್ತರು ಹರಕೆ ಸಲ್ಲಿಸಿದರು. ರಾತ್ರಿ ಕುಂದನ್ ನೃತ್ಯಾಲಯ ತಂಡದಿಂದ ವೈವಿಧ್ಯಮಯ ನೃತ್ಯ ಪ್ರದರ್ಶನ ಮತ್ತು ಸ್ಥಳೀಯ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ನಂತರ ಚಾಮುಂಡೇಶ್ವರಿ ಮತ್ತು ಮುತ್ತಪ್ಪ ದೇವಾಲಯದಲ್ಲಿ ವಿಶೇಷ ಪೂಜೆ, ಮಹಾ ಪೂಜೆ, ಮಹಾಮಂಗಳಾರತಿ, ತೀರ್ಥ ಪ್ರಸಾದ ವಿನಿಯೋಗ ನಡೆಯಿತು. ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ದೇವಾಲಯ ಸಮಿತಿಯ ಪಟ್ಟೆಮನೆ ಉದಯಕುಮಾರ್, ರಮೇಶ್ ಪಿಳ್ಳೈ, ಜಿ.ಪಿ.ಅನಿಲ್ ಕುಮಾರ್, ಯಂಕನ ಕೌಶಿಕ್, ಮುತ್ತಪ್ಪ ದೇವಾಲಯದ ಪೂಜಾರಿ ಶಿವರಾಮು, ಚಾಮುಂಡೇಶ್ವರಿ ದೇವಾಲಯದ ಮುಖ್ಯ ಅರ್ಚಕ ಮಂಜುನಾಥ್ ಉಡುಪ ಸೇರಿದಂತೆ ಸಮಿತಿ ಸದಸ್ಯರು ಇದ್ದರು.
15ರಲ್ಲಿ ಫೋಟೋ