

ಮೈಸೂರು: ಕಾರು ಡಿಕ್ಕಿ ಹೊಡೆದು ಗಾಯಗೊಂಡು ಚಿಕಿತ್ಸೆಗೆ ದಾಖಲಾಗಿದ್ದ ವದ್ಧ ಮತಪಟ್ಟಿದ್ದಾರೆ.
ಕೆ.ಟಿ.ಸ್ಟ್ರೀಟ್ ನಿವಾಸಿ ಚನ್ನಯ್ಯ(81) ಮತರು. ಡಿ.4 ರಂದು ಇರ್ವೀನ್ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದಾಗ ಬೆಂಗಳೂರಿಗೆ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿತ್ತು. ಗಾಯಗೊಂಡಿದ್ದ ಅವರನ್ನು ಕೆ.ಆರ್.ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಬೆಳಗ್ಗೆ ಮತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಎನ್.ಆರ್.ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.