ಭಕ್ತರ ಕಣ್ಮನ ಸೆಳೆದ ಅಲಂಕಾರ

IMG-20250110-WA0418
Published on

ಅರಸೀಕೆರೆ ಗ್ರಾಮಾಂತರ: ವೈಕುಂಠ ಏಕಾದಶಿ ಪ್ರಯುಕ್ತ ಸುಕ್ಷೇತ್ರ ಮಾಲೆಕಲ್ ಅಮರಗಿರಿ ತಿರುಪತಿಯಲ್ಲಿ ನೆಲೆಸಿರುವ ಶ್ರೀ ಲಕ್ಷ್ಮೀ ಸಮೇತ ನೆಲೆಸಿರುವ ವೆಂಕಟರಮಣ ಸ್ವಾಮಿ ದೇವಾಲಯ ಸೇರಿದಂತೆ ವಿವಿಧ ವಿಷ್ಣು ದೇವಾಲಯಗಳಲ್ಲಿ ವಿಶೇಷ ಪೂಜಾ ಕೈಂಕರ್ಯಗಳನ್ನು ನೆರವೇರಿಸಲಾಯಿತು.

ದೇವಾಲಯಕ್ಕೆ ಮುಂಜಾನೆಯಿಂದಲೇ ಆಗಮಿಸಿದ ಭಕ್ತರು ಸರತಿ ಸಾಲಿನಲ್ಲಿ ದೇವರ ದರ್ಶನ ಪಡೆದರು. ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಸೇರಿದಂತೆ ನಾನಾ ರಾಜಕೀಯ ಪಕ್ಷಗಳ ಮುಖಂಡರು ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು.

ಗುತ್ತಿನಕೆರೆ ರಂಗನಾಥ ಸ್ವಾಮಿ ದೇವಾಲಯದಲ್ಲೂ ತೋಮಾಲೆ ಅಲಂಕಾರ ಭಕ್ತರ ಕಣ್ಮನ ಸೆಳೆಯಿತು. ಕಣಕಟ್ಟೆ ಶ್ರೀ ಲಕ್ಷ್ಮೀ ನಾರಾಯಣ, ಬಿಳಿಕಲ್ಲು ರಂಗನಾಥ ಸ್ವಾಮಿ ದೇವಾಲಯ ಹಾರನಹಳ್ಳಿ ಚನ್ನಕೇಶ್ವರ ದೇವಾಲಯ, ಬೆಂಡೆಕೆರೆ ಸಮೀಪವಿರುವ ಮೂಡಲಗಿರಿ ತಿಮ್ಮಪ್ಪ ಸ್ವಾಮಿ ದೇವಾಲಯ, ಬೆಟ್ಟದಪುರದ ರಂಗನಾಥ ಸ್ವಾಮಿ ದೇವಾಲಯ, ರುಕ್ಮಿಣಿ ಪಾಂಡುರಂಗ ದೇವಾಲಯ, ಆಂಜನೇಯ ಸ್ವಾಮಿ ದೇವಾಲಯದಲ್ಲೂ ವೈಕುಂಠ ಏಕಾದಶಿ ಪ್ರಯುಕ್ತ ವಿಶೇಷ ಪೂಜೆಗಳು ಜರುಗಿದವು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net