ಕ್ಷೇತ್ರದ ಅಭಿವೃದ್ಧಿಯೇ ನನ್ನ ಪರಮಗುರಿ

3ATHNAIGRAMIN1
Published on

ಅಥಣಿ ಗ್ರಾಮೀಣ: ಶುದ್ಧ ಕುಡಿಯುವ ನೀರು ಮತ್ತು ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕೆಲಸ ಮಾಡುತ್ತೇನೆ. ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಯೇ ನನ್ನ ಧ್ಯೇಯ ಎಂದು ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅಥಣಿ ತಾಲೂಕಿನ ಅವರಖೋಡ ಗ್ರಾಮದಲ್ಲಿ 1 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಹಲವು ದಿನಗಳಿಂದ ಅನುಮೋದನೆ ದೊರೆತು ನನೆಗುದಿಗೆ ಬಿದ್ದಿರುವ ಕೃಷಿ ಮಹಾವಿದ್ಯಾಲಯ ನಿರ್ಮಾಣಕ್ಕೆ ಸರ್ಕಾರದಿಂದ ಹಣ ಬಿಡುಗಡೆಗೊಳಿಸಿ ಶೀಘ್ರದಲ್ಲೇ ಭೂಮಿಪೂಜೆ ನೆರವೇರಿಸಲಾಗುವುದು.

50 ಲಕ್ಷ ರೂ. ವೆಚ್ಚದಲ್ಲಿ ಮನೆಗಳಿಗೆ ಪೇವರ್ಸ್‌ ಅಳವಡಿಕೆ, 40 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಸಿಸಿ ರಸ್ತೆ ಹಾಗೂ 10 ಲಕ್ಷ ರೂ. ವೆಚ್ಚದಲ್ಲಿ ಪರಿಶಿಷ್ಟ ಪಂಗಡದ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದ್ದು, ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿ ಕೈಗೊಳ್ಳಬೇಕು. ಕಳಪೆ ಕಾಮಗಾರಿ ಕಂಡು ಬಂದರೆ ಕ್ರಮಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ಜಿಲ್ಲಾ ಹಾಲು ಉತ್ಪಾದಕರ ಸಹಕಾರಿ ಸಂಘಗಳ ಒಕ್ಕೂಟದ ನಿರ್ದೇಶಕ ಮಹಾದೇವ ಬಿಳಿಕುರಿ ಮಾತನಾಡಿದರು.

ಗ್ರಾಪಂ ಅಧ್ಯಕ್ಷ ಶ್ರೀಕಾಂತ ದರೂರ, ಬೀರಪ್ಪ ಲೋಕುರ, ಶಂಕರ ನಾಯಿಕ, ಬೈರಪ್ಪ ಕಾಂಬಳೆ, ಪಿಕೆಪಿಎಸ್ ಅಧ್ಯಕ್ಷ ಉದಯ ಲಡಗಿ, ಲಕ್ಷ್ಮಣ ತಳವಾರ, ದಶರಥ ಕಾಂಬಳೆ, ಪ್ರಶಾಂತ ಅಕ್ಕೋಳ, ಮುತ್ತಪ್ಪ ಮುಕಾಶಿ, ಜಡೆಪ್ಪ ಕುಂಬಾರ, ಮಲ್ಲಪ್ಪ ಕುಲ್ಲೊಳ್ಳಿ, ಅಧಿಕಾರಗಳಾದ ಸದಾಶಿವಯ್ಯ, ಸಂತೋಷ ಶೇಗುಣಸಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net