ಗ್ರಾಪಂ ವ್ಯಾಪ್ತಿಯ ಹಳ್ಳಿಗಳ ಅಭಿವೃದ್ಧಿ ಶ್ರಮಿಸುವೆ

13 mlv 1
filter: 0; fileterIntensity: 0.0; filterMask: 0; captureOrientation: 0; algolist: 0; multi-frame: 1; brp_mask:0; brp_del_th:null; brp_del_sen:null; delta:null; module: photo;hw-remosaic: false;touch: (0.23380986, 0.522393);sceneMode: 2621440;cct_value: 0;AI_Scene: (-1, -1);aec_lux: 0.0;aec_lux_index: 0;albedo: ;confidence: ;motionLevel: -1;weatherinfo: null;temperature: 40;
Published on

ಮಳವಳ್ಳಿ: ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತೆ ಸೇರಿದಂತೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಂಡು ಹಳ್ಳಿಗಳ ಅಭಿವೃದ್ಧಿ ಕೆಲಸಗಳನ್ನು ಮಾಡಲು ಕಾರ್ಯಯೋಜನೆ ರೂಪಿಸಿಕೊಂಡು ಶ್ರಮಿಸಲಾಗುವುದು ಎಂದು ರಾಗಿಬೊಮ್ಮನಹಳ್ಳಿ ಗ್ರಾಪಂ ನೂತನ ಅಧ್ಯಕ್ಷ ಪ್ರಭು ತಿಳಿಸಿದರು.


ಗ್ರಾಮದ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಿಗದಿಯಾಗಿದ್ದ ಆಡಳಿತ ಮಂಡಳಿ ಅಧ್ಯಕ್ಷ ಚುನಾವಣೆಯಲ್ಲಿ ಅವಿರೋಧವಾಗಿ ಆಯ್ಕೆಯಾದ ನಂತರ ಮಾತನಾಡಿದ ಅವರು, ನಮ್ಮ ಸ್ಥಳೀಯ ನಾಯಕ ಆರ್.ವಿಶ್ವಾಸ್ ಅವರ ಸಲಹೆಯಂತೆ ನಮ್ಮ ಎಲ್ಲ ಸದಸ್ಯರ ಸಹಕಾರದೊಡನೆ ಹಾಗೂ ಅವಿರೋಧವಾಗಿ ಆಯ್ಕೆಯಾಗಲು ಕಾರಣೀಭೂತರಾಗಿರುವವರಿಗೆ ಧನ್ಯವಾದ ಸಲ್ಲಿಸುತ್ತೇನೆ ಎಂದ ಅವರು, ದೊರೆತಿರುವ ಅಧಿಕಾರವನ್ನು ಬಳಸಿಕೊಂಡು ಗ್ರಾಪಂ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲಿ 15ನೇ ಹಣಕಾಸು ಅನುದಾನದ ಜತೆಗೆ ನರೇಗಾ ಯೋಜನೆ ಮೂಲಕ ಸಮಗ್ರವಾಗಿ ಅಭಿವೃದ್ಧಿಪಡಿಸಲು ಶ್ರಮಿಸಲಾಗುವುದು ಎಂದರು.


ಇದೇ ಸಂದರ್ಭದಲ್ಲಿ ಜಿಪಂ ಮಾಜಿ ಸದಸ್ಯ ಆರ್.ಎನ್.ವಿಶ್ವಾಸ್, ಗ್ರಾಪಂ ಉಪಾಧ್ಯಕ್ಷೆ ನಾಗಮ್ಮ, ಸದಸ್ಯರಾದ ಆರ್.ಬಿ.ಮಹದೇವಸ್ವಾಮಿ, ಬಿ.ಎಂ.ಗುಂಡಶೆಟ್ಟಿ, ಬಿ.ಕೆ.ರವಿ, ಮಂಜುಳಾ, ಶಾರದಮ್ಮ, ಶೀಲಾ, ರೂಪಾ, ಚಿನ್ನಮ್ಮ, ಮಂಗಳಮ್ಮ, ಮಹದೇವಮ್ಮ, ಮಹದೇವು, ಪ್ರಕಾಶ್, ಶಿವಸ್ವಾಮಿ, ಗ್ರಾಮದ ಮುಖಂಡರು ನೂತನ ಅಧ್ಯಕ್ಷರನ್ನು ಅಭಿನಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net