ಪಶ್ಚಿಮ ವಲಯ ಪೊಲೀಸರ ಕರ್ತವ್ಯ ನಿಷ್ಠೆ ಅನನ್ಯ: ಅಮಿತ್ ಸಿಂಗ್ ಶ್ಲಾಘನೆ

Sub_Western-Range
Published on

ಸುಬ್ರಹ್ಮಣ್ಯ: ಪಶ್ಚಿಮ ವಲಯಕ್ಕೆ ಸಂಬಂಧ ಪಟ್ಟ 4 ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಕ್ಷಣ ಪೊಲೀಸ್ ಅಧಿಕಾರಿಗಳು, ಸಿಬ್ಬಂದಿ ಸ್ಪಂದಿಸುತ್ತ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕರ್ತವ್ಯ ನಿಷ್ಠೆಯನ್ನು ಮೆರೆದಿರುತ್ತಾರೆ. ಯಾವುದೇ ಘಟನೆ ಸಂಭವಿಸಿದಲ್ಲಿ ಕೆಲವೊಮ್ಮೆ ಸಾಮಾಜಿಕ ಜಾಲತಾಣಗಳಲ್ಲಿ ಜನರಿಗೆ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅತಿ ವೇಗವಾಗಿ ಸುದ್ದಿಗಳು ತಿಳಿಯುತ್ತವೆ. ಈ ನಿಟ್ಟಿನಲ್ಲಿ ಪತ್ರಕರ್ತರು ಸಮಾಜ ಸೇವೆಯುಳ್ಳವರಾಗಿರುತ್ತಾರೆ ಎಂದು ಪೊಲೀಸ್ ಮಹಾನಿರೀಕ್ಷಕ ಅಮಿತ್ ಸಿಂಗ್ ಹೇಳಿದರು.

ಸುಬ್ರಹ್ಮಣ್ಯ ಪೊಲೀಸ್ ಠಾಣೆಗೆ ಗುರುವಾರ ಭೇಟಿ ನೀಡಿ ಸಿಬ್ಬಂದಿಯೊಂದಿಗೆ ಕುಂದುಕೊರತೆಗಳ ಬಗ್ಗೆ ಚರ್ಚಿಸಿ ಮಾತನಾಡಿದರು.

ಪೊಲೀಸ್ ಅಧೀಕ್ಷಕ ಯತೀಶ್, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಜೇಂದ್ರ ಕುಮಾರ್, ಪೊಲೀಸ್ ಉಪ ಅಧೀಕ್ಷಕ ಅರುಣ್ ನಾಗೇಗೌಡ, ಸುಬ್ರಹ್ಮಣ್ಯ ಪೊಲೀಸ್ ಉಪನಿರೀಕ್ಷಕರಾದ ಕಾರ್ತಿಕ್ ಕೆ.ಮತ್ತು, ಮಹೇಶ್ ಉಪಸ್ಥಿತರಿದ್ದರು.

ಹೆಚ್ಚುವರಿ ಸಿಬ್ಬಂದಿ ನಿಯೋಜನೆ

ಕುಕ್ಕೆ ಸುಬ್ರಹ್ಮಣ್ಯ ದೇಶ-ವಿದೇಶದಲ್ಲಿ ಪ್ರಸಿದ್ಧವಾದ ಕ್ಷೇತ್ರವಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಇಲ್ಲಿ ನಿತ್ಯ ಇಬ್ಬರು ಪೊಲೀಸ್ ಕಾನ್ಸ್ಟೆಬಲ್ ನಿಯೋಜನೆ ಬಹಳ ಮುಖ್ಯ. ಇದರ ಬಗ್ಗೆ ಚರ್ಚಿಸಿ ನಿರ್ಧರಿಸುತ್ತೇವೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net