ಗಂಗೂಬಾಯಿ ಹಾನಗಲ್ ಅವರ ಜನ್ಮ ಸ್ಥಳ ಗಂಗೋತ್ರಿಗೆ ಭೇಟಿ ನೀಡಿ, ಅಭಿವೃದ್ಧಿಯ ಬಗ್ಗೆ ಚರ್ಚಿಸಿದ ಜಿಲ್ಲಾಧಿಕಾರಿ

IMG_20250821_223008.jpg
Published on

ಧಾರವಾಡ: ಗಾನವಿದೂಷಿ ಗಂಗೂಬಾಯಿ ಹಾನಗಲ್ ಅವರ ಜನ್ಮಸ್ಥಳವಾದ ನಗರದ ಹೊಸಯಲ್ಲಾಪೂರ ಓಣಿಯ ಗಂಗೋತ್ರಿಗೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಭೇಟಿ ನೀಡಿ, ಅವರ ಹುಟ್ಟಿದ ಮನೆ ಅಭಿವೃದ್ಧಿಪಡಿಸುವ ಕುರಿತು ಸ್ಥಳೀಯರು, ಜನಪ್ರತಿನಿಧಿಗಳು ಹಾಗೂ ಸಂಗೀತ ಕಲಾವಿದರೊಂದಿಗೆ ಸ್ಥಳದಲ್ಲಿ ಚರ್ಚಿಸಿದರು.

ಈ ವೇಳೆ ಅವರು ಮಾತನಾಡಿ, ಧಾರವಾಡ ಜಿಲ್ಲೆಯ ಕೀರ್ತಿಯನ್ನು ರಾಷ್ಟ್ರೀಯ ಮಟ್ಟದಲ್ಲಿ ಮೆರೆಸಿದ್ದು, ನಮ್ಮ ಜಿಲ್ಲೆಯ ಹೆಮ್ಮೆ. ದಿ.ಗಂಗೂಬಾಯಿ ಹಾನಗಲ್ ಅವರನ್ನು ಸ್ಮರಣೀಯಗೊಳಿಸಲು ಜಿಲ್ಲಾಡಳಿತದಿಂದ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

ಮಹಾನಗರ ಪಾಲಿಕೆಯ ಸದಸ್ಯ ಶಂಕರ ಶಳಕೆ, ಹಿರಿಯ ವಕೀಲ ಅರುಣ ಚರಂತಿಮಠ, ಕಲಾವಿದ ಪ್ರಸನ್ನ ಗುಡಿ, ಡಾ. ಶಶೀಧರ ನರೇಂದ್ರ, ರಾಘವೇಂದ್ರ ಗುಡಿ, ಸಂಗೀತ ಕಲಾವಿದೆ ಭಾರ್ಗವಿ ಗುಡಿ, ವೀರಣ್ಣ ಪತ್ತಾರ, ಉದಯ ಯಂಡಿಗೇರಿ, ಅಣ್ಣಪ್ಪ ಪಾಲನಕರ, ಸಮೀರ ಜೋಶಿ, ಸಂಜೀವ ಲಕ್ಕಮನಹಳ್ಳಿ ಸೇರಿ ಗಂಗೂಬಾಯಿ ಹಾನಗಲ್ ಅವರ ಅನುಯಾಯಿಗಳು, ಅಭಿಮಾನಿಗಳು, ಸಂಗೀತ ಸೇವಕರು, ಸಂಗೀತಾಸಕ್ತರು, ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net