ನಾಯಿ ಅಡ್ಡ ಬಂದ್ದಿದ್ದರಿಂದ ಬೈಕ್ ಸವಾರ ಬಿದ್ದು ಸಾವು

Bike Accident_2
Published on

ಹಾನಗಲ್ಲ: ನಾಯಿ ಅಡ್ಡ ಬಂದಿದ್ದರಿಂದ ಬೈಕ್ ಸವಾರ ಬಿದ್ದು ಮೃತಪಟ್ಟ ಘಟನೆ ತಾಲೂಕಿನ ಕಲಕೇರಿ ಗ್ರಾಮದ ಬಳಿ ಭಾನುವಾರ ಸಂಭವಿಸಿದೆ.
ತಾಲೂಕಿನ ಹೇರೂರ ಗ್ರಾಮದ ರಾಮಪ್ಪ ತಿರಕಪ್ಪ ಬಾಗಣ್ಣನವರ (56) ಮೃತ ದುರ್ದೈವಿ.
ಇವರು ಕಲಕೇರಿ ಗ್ರಾಮದ ಬಳಿಯಿಂದ ಹೇರೂರ ಗ್ರಾಮಕ್ಕೆ ಬರುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ನಾಯಿ ಅಡ್ಡ ಬಂದಿದ್ದರಿಂದ ಬೈಕ್‌ನಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಅವರನ್ನು ಹುಬ್ಬಳ್ಳಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಆಡೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net